34 ವರ್ಷದಿಂದ ತಲೆಮರೆಸಿಕೊಂಡಿದ್ದವನು ಹೊಳೆಹೊನ್ನೂರು ಪೊಲೀಸರಿಗೆ ಸಿಕ್ಕಿಬಿದ್ದ, ಯಾವ ಕೇಸ್? ಸಿಕ್ಕವನಾರು?

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 25  MARCH 2021

34 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ರಾಮಿನಕೊಪ್ಪದ ರೂಪ್ಲಾನಾಯ್ಕ (68) ಬಂಧಿತ. 1987ರಲ್ಲಿ ದಾಖಲಾಗಿದ್ದ ಮನೆ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದ ರೂಪ್ಲಾನಾಯ್ಕ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ರೂಪ್ಲಾನಾಯ್ಕನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಹೊಳೆಹೊನ್ನೂರು ಠಾಣೆ ಪಿಎಸ್ಐ ಸುರೇಶ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಲಿಂಗೇಗೌಡ, ಮಲ್ಲಿಕಾರ್ಜುನ, ಪ್ರಕಾಶ್, ದೇವೇಂದ್ರನಾಯ್ಕ ಅವರು ಕಾರ್ಯಾಚರಣೆ ನಡೆಸಿ, ರೂಪ್ಲಾನಾಯ್ಕನನ್ನು ಪತ್ತೆ ಹಚ್ಚಿದ್ದಾರೆ.

ಆರೋಪಿಯನ್ನು ನ್ಯಾಯಾಲಯದ ಮುಂದೆಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

prison hand cuff image

Leave a Comment