ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯಲ್ಲಿದ್ದವರು ಕೆಲಸಕ್ಕೆ ತೆರಳಿದಾಗ ಬಾಗಲಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪ ಸಮೀಪದ ಮಹಾಲಕ್ಷ್ಮಿ ಲೇಔಟ್ನಲ್ಲಿ ಘಟನೆ ಸಂಭವಿಸಿದೆ.
ಯೋಗೇಂದ್ರಪ್ಪ ಎಂಬುವವರ ಮನೆಯ ಗೇಟ್ಗೆ ಹಾಕಿದ್ದ ಬೀಗ, ಬಾಗಿಲಿನಿಂದ ಮುಂದಿದ್ದ ಕಬ್ಬಿಣ್ಣದ ಬಾಗಿಲಿನ ಇಂಟರ್ ಲಾಕ್, ಬಾಗಿಲಿನ ಬೀಗ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಕೊಠಡಿಯ ಬೀರುವಿನ ಲಾಕ್ ಮುರಿದು ಕಳ್ಳತನ ಮಾಡಿದ್ದಾರೆ.

ವಿನೋಬನಗರ ಪೊಲೀಸ್ ಚೌಕಿ ಸಮೀಪ ಯೋಗೇಂದ್ರಪ್ಪ ಅವರು ಡಯೋಗ್ನಸ್ಟಿಕ್ ಲ್ಯಾಬ್ ನಡೆಸುತ್ತಿದ್ದಾರೆ. ಜುಲೈ 7ರಂದು ಬೆಳಗ್ಗೆ ಯೋಗೇಂದ್ರಪ್ಪ ತಮ್ಮ ಮನೆಯ ಬಾಗಿಲು, ಕಬ್ಬಿಣದ ಬಾಗಿಲು ಮತ್ತು ಗೇಟ್ಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮುಗಿಸಿ ಪತ್ನಿಯೊಂದಿಗೆ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.
ಇದನ್ನೂ ಓದಿ » ಮರದ ದಿಮ್ಮಿ ಉರುಳಿ ಕಾರ್ಮಿಕನ ತಲೆಗೆ ಗಂಭೀರ ಗಾಯ, ಸಾವು
ಬೀರುವಿನಲ್ಲಿದ್ದ ₹60 ಸಾವಿರ ಮೌಲ್ಯದ 710 ಗ್ರಾಂ ತೂಕದ ಬೆಳ್ಳಿ ವಸ್ತುಗಳು, ₹5.50 ಲಕ್ಷ ಮೌಲ್ಯದ 158 ಗ್ರಾಂ ತೂಕದ ಚಿನ್ನಾಭರಣ, ₹1.10 ಲಕ್ಷ ನಗದು ಕಳ್ಳತನವಾಗಿದೆ ಎಂದು ಅರೋಪಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















