ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಕುಟುಂಬದವರು ದುಬೈ (Dubai) ಪ್ರವಾಸಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ದುಬೈ ಪ್ರವಾಸದಿಂದ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಟ್ಯಾಂಕ್ ಮೊಹಲ್ಲಾದ ಯುಸುಫ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯ ಬೀರುವಿನಲ್ಲಿದ್ದ 1.10 ಲಕ್ಷ ರು. ಮೌಲ್ಯದ ಚಿನ್ನಾಭರಣ, 28 ಸಾವಿರ ರೂ. ಮೌಲ್ಯದ ಬೆಳ್ಳಿ ವಸ್ತುಗಳು, ಆರು ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.

ದುಬೈ ಪ್ರವಾಸ ಮುಗಿಸಿ ಯುಸುಫ್ ಅವರ ಕುಟುಂಬ ಶಿವಮೊಗ್ಗಕ್ಕೆ ಹಿಂತಿರುಗುತ್ತಿತ್ತು. ಆದ್ದರಿಂದ ಅವರ ಅಳಿಯ ಮನೆ ಕ್ಲೀನ್ ಮಾಡಿಸಲು ಕೆಲಸದವರನ್ನು ಕರೆದೊಯ್ದಿದ್ದರು. ಆಗ ಮನೆಯ ಮುಂಬಾಗಿಲಿನ ಇಂಟರ್ ಲಾಕ್ ಮುರಿದಿತ್ತು. ಪರಿಶೀಲಿಸಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಯಾವ ರಾಶಿಗೆ ಲಾಭವಿದೆ?
LATEST NEWS
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






