ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 ಮಾರ್ಚ್ 2022
ಮನೆ ಸಮೀಪದ ಬಾವಿಗೆ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಗೃಹಿಣಿಯ ಅತ್ತೆ ವಿರುದ್ಧ ಪ್ರಕರಣ ದಾಖಲಾಗಿದೆ.
ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದ ಶಶಿಕಲಾ (23) ಮೃತಳು. ಪತಿ ಮತ್ತು ಮಾವ ಕೆಲಸಕ್ಕೆ ತೆರಳಿದ ಬಳಿಕ ಘಟನೆ ಸಂಭವಿಸಿದೆ.
ಅತ್ತೆ ಮಂಜುಳಮ್ಮ ಜೊತೆಗೆ ಜಗಳವಾಗಿದೆ. ಇದರಿಂದ ಮನನೊಂದು ಶಶಿಕಲಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಶಿಕಲಾಗೆ ಒಂದೂವರೆ ವರ್ಷದ ಮಗು ಇದೆ.
ಘಟನೆ ಸಂಬಂಧ ಮಂಜುಳಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಶಿಕಲಾ ಅವರ ಪೋಷಕರು ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















