ಶಿವಮೊಗ್ಗ ಲೈವ್
ಶಿವಮೊಗ್ಗ: ನೆಹರೂ ರಸ್ತೆಯಲ್ಲಿ ಬಟ್ಟೆ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ (bike stolen) ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಹೋಗಿ ಒಂದೇ ಗಂಟೆಯಲ್ಲಿ ಬೈಕ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಬೊಮ್ಮನಕಟ್ಟೆ ನಿವಾಸಿ ಪ್ರೀತಮ್ ಎಂಬುವವರು ಫೆಬ್ರವರಿ 6ರ ರಾತ್ರಿ 9:45ಕ್ಕೆ ತಮ್ಮ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಅನ್ನು ನೆಹರೂ ರಸ್ತೆಯ ಬಟ್ಟೆ ಅಂಗಡಿ ಮುಂದೆ ನಿಲ್ಲಿಸಿ ಹೋಗಿದ್ದರು. ರಾತ್ರಿ 10:45ಕ್ಕೆ ವಾಪಸ್ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಬೈಕ್ ಪತ್ತೆಯಾಗಿಲ್ಲ. ಬೈಕ್‌ನ ಮೌಲ್ಯದ ₹45,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಗಾಂಧಿ ಬಜಾರ್ ಮುಂದೆ ಮಹಾಕಾಳಿಯ ಅಬ್ಬರ, ಬೃಹತ್ ಕಲಾಕೃತಿಯ ವಿಶೇಷತೆ ಏನು?
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: