ಶಿವಮೊಗ್ಗ ಲೈವ್.ಕಾಂ | SAGARA NEWS | 13 ಸೆಪ್ಟಂಬರ್ 2020
ಸಾಗರ ತಾಲೂಕು ಬ್ಯಾಕೋಡು ಗ್ರಾಮದಲ್ಲಿ ಶನಿವಾರ ರಾತ್ರಿ ದಂಪತಿಯ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಚಿನ್ನದ ವ್ಯಾಪಾರ ಮಾಡುತ್ತಿದ್ದ ಇವರ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬ್ಯಾಕೋಡಿನ ಸುಂದರ್ ಶೇಟ್ (88) ಮತ್ತು ಪತ್ನಿ ಸುಲೋಚನಾ ಶೇಟ್ (70) ಅವರ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಕರೂರು ಹೋಬಳಿ ಭಾಗದಲ್ಲಿ ಬಹು ವರ್ಷದಿಂದ ಸುಂದರ್ ಶೇಟ್ ಅವರು ಚಿನ್ನಾಭರಣದ ವ್ಯಾಪಾರ ನಡೆಸುತ್ತಿದ್ದರು.
ಶನಿವಾರ ರಾತ್ರಿ 8 ಗಂಟೆ ಹೊತ್ತಿಗೆ ಕೊಲೆ ನಡೆದಿರುವ ಶಂಕೆ ಇದೆ. ಆದರೆ ಹತ್ಯೆ ಮಾಡಿದವರು ಯಾರು, ಕೊಲೆಗೆ ಕಾರಣವೇನು ಅನ್ನುವುದು ಇನ್ನು ತಿಳಿದು ಬಂದಿಲ್ಲ. ದಂಪತಿ ಹತ್ಯೆ ವಿಚಾರ ಬ್ಯಾಕೋಡು ಭಾಗದಲ್ಲಿ ಭಾರಿ ಆತಂಕ ಸೃಷ್ಟಿಸಿದೆ.
ಇಲ್ಲಿನ ಉಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಅಧಿಕಾರಿಗಳು ಇವತ್ತು ಸ್ಥಳಕ್ಕೆ ಬರುವ ಸಾಧ್ಯತೆ ಇದೆ. ಸುಂದರ್ ಶೇಟ್ ದಂಪತಿಗೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಇವರು ಕುಂದಾಪುರದಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]