ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021
ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ತೀರ್ಥಹಳ್ಳಿಯ ಮನೆಯೊಂದಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ಹೈದರಾಬಾದ್ನಿಂದ ಅಧಿಕಾರಿಗಳ ತಂಡ ಬಂದಿತ್ತು ಎಂದು ಹೇಳಲಾಗುತ್ತಿದೆ.
ತೀರ್ಥಹಳ್ಳಿಯ ಮೀನು ಮಾರುಕಟ್ಟೆ ರಸ್ತೆಯಲ್ಲಿ ಇರುವ ಮನೆಯೊಂದರಲ್ಲಿ ಶೋಧ ಕಾರ್ಯ ನಡೆಸಲಾಗಿದೆ.
ಉಗ್ರ ಸಂಪರ್ಕದ ಶಂಕೆ
ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆ, ಯುವಕರಿಬ್ಬರ ಮನೆಗೆ ಎನ್ಐಎ ಅಧಿಕಾರಿಗಳ ತಂಡ ಭೇಟಿ ನೀಡಿತ್ತು.
ಸ್ಯಾಟಲೈಟ್ ಫೋನ್ ಬಳಕೆ
ಕಳೆದ ವರ್ಷ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿತ್ತು.ಈ ಹಿನ್ನೆಲೆ ಶೋಧ ಕಾರ್ಯ ನಡೆಸಲಾಗಿತ್ತು. ಆದರೆ ಯುವಕರು ನಾಪತ್ತೆಯಾಗಿದ್ದರು. ಇದೆ ಪ್ರಕರಣ ಸಂಬಂಧ ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.