ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 4 DECEMBER 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಐಜಿಪಿ ರವಿ, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದು ಹೇಳಿದರು.
ಕಟ್ಟುನಿಟ್ಟು ಕ್ರಮ ಕೈಗೊಳ್ಳಲಾಗಿದೆ
- ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಯಿಸಲಾಗಿದೆ.
- 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಪೊಲೀಸ್ ಬಂದೋಬಸ್ತು ತೀವ್ರಗೊಳಿಸಲಾಗಿದೆ.
- 9 ಚೆಕ್ಪೋಸ್ಟ್ಗಳಲ್ಲಿ ಬಿಗಿ ಬಂದೋಬಸ್ತು ಮಾಡಲಾಗಿದ್ದು, ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ.
- 22 ಚೀತಾ ಮತ್ತು 13 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ಇರಿಸಿದೆ.
ನಾಗೇಶ್ ಭೇಟಿಯಾದ ಐಜಿಪಿ
ಹಲ್ಲೆಗೊಳಗಾದ ಬಜರಂಗದಳ ಕಾರ್ಯಕರ್ತ ನಾಗೇಶ್ ಅವರನ್ನು ಐಜಿಪಿ ರವಿ ಅವರು ಭೇಟಿಯಾಗಿ ಘಟನೆ ಮಾಹಿತಿ ಪಡೆದರು. ಈ ವೇಳೆ ಹಲ್ಲೆಕೋರರ ಕುರಿತು ಮಾಹಿತಿ ಕೇಳಿದ್ದಾಗಿ ಐಜಿಪಿ ತಿಳಿಸಿದರು. ಈ ವೇಳೆ ನಾಗೇಶ್ ಹೇಳಿದ್ದೇನು? ಇಲ್ಲಿದೆ ವಿಡಿಯೋ ರಿಪೋರ್ಟ್
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ವಿಧಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]