ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020
ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಯಾದ ಬೆನ್ನಿಗೆ, ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮದ್ಯ ಮತ್ತು ಸಾಗಣೆಗೆ ಬಳಸುತ್ತಿದ್ದ ಆಟೋವನ್ನು ವಶಕ್ಕೆ ಪಡೆಯಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮತ್ತೂರು ರಸ್ತೆಯಲ್ಲಿ ರಸ್ತೆಗಾವಲು ಮಾಡುತ್ತಿದ್ದ ವೇಳೆ ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಆಟೋದಲ್ಲಿ 77.760 ಲೀಟರ್ ಮದ್ಯ ಸಾಗಣೆ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಂತೆಕಡೂರು ಗ್ರಾಮದ ಶೇಖರ್ ಎಂಬಾತನನ್ನು ಬಂಧಿಸಲಾಗಿದೆ.
ಆಟೋದ ಮೌಲ್ಯ 50 ಸಾವಿರ ರೂ, ಮದ್ಯದ ಮೌಲ್ಯ 40 ಸಾವಿರ ರೂ. ಎಂದು ಅಂದಾಜು ಮಾಡಲಾಗಿದೆ.
ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್ಕರ್, ಅಬಕಾರಿ ಉಪ ನಿರೀಕ್ಷಕಿ ದಿವ್ಯಾ, ಅಬಕಾರಿ ರಕ್ಷಕರಾದ ರಂಜನ್, ನಾಗಪ್ಪ ಶಿರೋಳ್ ಹಾಗೂ ವಾಹನ ಚಾಲಕ ನ್ಯಾನರಾಜ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
77 liters Of illegal liquor seized at Mattur Road by Shimoga District Excise Department officials. An auto was seized during the operation said Capt Ajith Kumar in a press release.