ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 NOVEMBER 2023
SHIMOGA : ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಾಬೀತಾದ ಹಿನ್ನೆಲೆ ಅಪ್ರಾಪ್ತನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
2021ರಲ್ಲಿ ಶಿಕಾರಿಪುರದಲ್ಲಿ 3 ವರ್ಷದ ಬಾಲಕಿ ಮೇಲೆ 17 ವರ್ಷ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಜೆ.ಲಕ್ಷ್ಮಣ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲಕ್ಷ ಲಕ್ಷ ಮೌಲ್ಯದ ಅತ್ಯಂತ ಅಪರೂಪದ ನಾಟ ವಶ, ರಾಜ್ಯದಲ್ಲೇ ಮೊದಲು ಇಂತಹ ಪ್ರಕರಣ
ಆರೋಪ ಸಾಬೀತಾದ ಹಿನ್ನೆಲೆ ವಿಚಾರಣೆ ನಡೆಸಿದ ಶಿವಮೊಗ್ಗದ ಎಫ್ಟಿಎಸ್ಸಿ ನ್ಯಾಯಾಲಯದ ನ್ಯಾ.ಲತಾ ಅವರು ಶಿಕ್ಷೆ ವಿಧಿಸಿದ್ದಾರೆ. ಅಪ್ರಾಪ್ತ ಬಾಲಕನಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 1 ತಿಂಗಳು ಹೆಚ್ಚುವರಿ ಸಾದಾ ಕಾರಗೃಹ ಶಿಕ್ಷೆ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಹರಿಪ್ರಸಾದ್ ಮತ್ತು ಮಮತಾ ವಾದ ಮಂಡಿಸಿದ್ದರು.
ಇದನ್ನೂ ಓದಿ – ಸಿಗಂದೂರು ಸೇತುವೆ ಮೇಲಿಂದ ಬಿದ್ದು ಕಾರ್ಮಿಕ ಸಾವು
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





