ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಸಬೀತಾದ ಹಿನ್ನೆಲೆ ಓರ್ವ ಮಹಿಳೆ ಸೇರಿ ಇಬ್ಬರಿಗೆ ಜೈಲು (Imprisonment) ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಶಿಕಾರಿಪುರದ ಯಾಸೀರ್ ಪಾಷಾ (27) ಎಂಬಾತನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗಿದೆ. ಶಹಜಾನ್ ಅಲಿಯಾಸ್ ಸಾನಿಯಾ ಬೇಗಂಗೆ (52) ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹25 ಸಾವಿರ ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕಾರಿಪುರದ ಕುಂಬಾರ ಗುಂಡಿ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಗುರುರಾಜ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ಈ ಸಂಬಂಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪಿಎಸ್‌ಐ ಪ್ರಶಾಂತ್ ಕುಮಾರ್, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾ.ಮಂಜುನಾಥ ನಾಯಕ್ ಅವರು ಇಬ್ಬರಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸುರೇಶ್ ಕುಮಾರ್ ವಾದಿಸಿದ್ದರು.
ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200