ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 APRIL 2024
SAGARA : ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ್ದಕ್ಕೆ ಮಾನಸಿಕ ಕಿರುಕುಳ ನೀಡಿ ಯುವತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಭಟ್ಕಳ ತಾಲ್ಲೂಕಿನ ಮಾರುಕೇರಿ ಗ್ರಾಮದ ಓಂಕಾರ್ ಎಂಬಾತನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ, 7 ಸಾವಿರ ರೂ. ದಂಡ ವಿಧಿಸಿದೆ.
ಯುವತಿಯೊಬ್ಬಳ ಆತ್ಮಹತ್ಯೆ ಪ್ರಕರಣ ಸಂಬಂಧ, ಆಕೆಯ ತಂದೆ ದೂರು ನೀಡಿದ್ದರು. ತನಿಖೆ ನಡೆಸಿದ ರಿಪ್ಪನ್ಪೇಟೆ ಪೊಲೀಸರು ಓಂಕಾರ್ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಭಾವತಿ ಜಿ. ಅವರು, ಆರೋಪ ಸಾಬೀತಾದ ಹಿನ್ನೆಲೆ ಓಂಕಾರ್ಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಅಣ್ಣಪ್ಪ ನಾಯ್ಕ ವಾದಿಸಿದ್ದರು.
ಇನ್ಸ್ಟಾಗ್ರಾಂನಲ್ಲಿ ಪರಿಚಯ
ಭಟ್ಕಳದ ಓಂಕಾರ್ಗೆ ಇನ್ಸ್ಟಾಗ್ರಾಂನಲ್ಲಿ ಹೊಸನಗರದ ಯುವತಿಯ ಪರಿಚಯವಾಗಿತ್ತು. ಆಕೆಯ ಮೊಬೈಲ್ ನಂಬರ್ ಪಡೆದು, ಮದುವೆ ಆಗುವಂತೆ ಪೀಡಿಸುತ್ತಿದ್ದ. 2021ರ ಮಾರ್ಚ್ 12 ರಂದು ಆಕೆ ಓದುತ್ತಿದ್ದ ಕಾಲೇಜಿಗೆ ತೆರಳಿದ್ದ ಓಂಕಾರ್, ಆಕೆಯ ಕೈ ಹಿಡಿದು ಎಳೆದಾಡಿ ಮದುವೆಯಾಗುವಂತೆ ಒತ್ತಾಯಿಸಿದ್ದ. ಅಲ್ಲದೆ ತಂದೆ, ತಾಯಿಗೆ ವಿಷಯ ತಿಳಿಸುವುದಾಗಿ ಬೆದರಿಸಿದ್ದ.
ಕಳೆನಾಶಕ ಸೇವಿಸಿ ಆತ್ಮಹತ್ಯೆ
ಹೆದರಿದ ಯುವತಿ ಅದೇ ದಿನ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಳು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 2021ರ ಮಾರ್ಚ್ 19 ರಂದು ಆಕೆ ಮೃತಪಟ್ಟಿದ್ದಳು. ಅಲ್ಲದೆ ತನ್ನ ಸಾವಿಗೆ ಓಂಕಾರ್ ಕಿರುಕುಳ ಕಾರಣ ಎಂದು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಳು. ಯುವತಿ ಮೃತಪಟ್ಟ ಬಳಿಕ ಆಕೆಯ ತಂದೆ ಓಂಕಾರ್ ವಿರುದ್ಧ ದೂರು ನೀಡಿದ್ದರು.
ಇದನ್ನೂ ಓದಿ – ಕಲ್ಯಾಣ ಮಂಟಪದಲ್ಲಿ ಗುರಾಯಿಸಿದ್ದಕ್ಕೆ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ, ಬಿಯರ್ ಬಾಟಲಿಯಿಂದ ಚುಚ್ಚಿ ಗಾಯ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422