ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 19 ಏಪ್ರಿಲ್ 2022
ಒಂಭತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಮಂಜಪ್ಪ (49) ಶಿಕ್ಷೆಗೆ ಒಳಗಾದವನು. ಈತನ ವಿರುದ್ಧ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಏನಿದು ಪ್ರಕರಣ?
2020ರ ಡಿಸೆಂಬರ್ 5ರಂದು 9 ವರ್ಷದ ಬಾಲಕಿ ಬೆಂಕಿ ಪೊಟ್ಟಣ ಕೇಳಿಕೊಂಡು ಮಂಜಪ್ಪನ ಮನೆಗೆ ಬಂದಿದ್ದಳು. ಆಕೆಯ ಮೇಲೆ ಮಂಜಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿ ನೀಡಿದ ಹೇಳಿಕೆ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಹಿಳಾ ಠಾಣೆ ಪಿಎಸ್ಐ ಶಾಂತಲಾ ಅವರು ತನಿಖೆ ನಡೆಸಿ 2021ರ ಜನವರಿ 27ರಂದು ದೋಷಾರರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲದಯದ ಎಫ್.ಟಿ.ಎಸ್.ಸಿ-1 ಕೋರ್ಟ್’ನ ನ್ಯಾಯಾಧೀಶರಾದ ದಯಾನಂದ್ ವಿ.ಹೆಚ್ ಅವರು ಮಂಜಪ್ಪ ತಪ್ಪೆಸಗಿದ್ದಾನೆ ಎಂದು ತೀರ್ಪು ನೀಡಿದ್ದಾರೆ. ಮಂಜಪ್ಪಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿದ್ದಾರೆ.
ಹರಿಪ್ರಸಾದ್ ಅವರು ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ