ಶಿವಮೊಗ್ಗದ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, ಜೊತೆಗಿದ್ದ ವ್ಯಕ್ತಿ ಯಾರು? ‌SP ಫಸ್ಟ್‌ ರಿಯಾಕ್ಷನ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಸಾಗರ ರಸ್ತೆಯ ಅಶೋಕ ಗ್ರ್ಯಾಂಡ್‌ ಲಾಡ್ಜ್‌ನ ಕೊಠಡಿಯಲ್ಲಿ ಮಹಿಳೆಯೊಬ್ಬರು ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಆ ಸಂದರ್ಭ ಕೊಠಡಿಯಲ್ಲಿದ್ದ ಪರಿಚಿತ ವ್ಯಕ್ತಿಗು ಸುಟ್ಟ ಗಾಯಗಳಾಗಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರೂಮ್‌ನಲ್ಲಿ ಗೀತಾ ಜೊತೆಗೆ ಗಿರೀಶ್‌

ದಾವಣಗೆರೆಯ ಗಿರೀಶ್‌ ಎಂಬುವವರ ಹೆಸರಿನಲ್ಲಿ ಅಶೋಕ ಗ್ರ್ಯಾಂಡ್‌ ಲಾಡ್ಜ್‌ನಲ್ಲಿ ರೂಂ ಬುಕ್‌ ಆಗಿತ್ತು. ರೂಂ ನಂಬರ್‌ 211ರಲ್ಲಿ ಗಿರೀಶ್‌ ಜೊತೆಗೆ ಗೀತಾ (45) ಎಂಬುವವರು ತಂಗಿದ್ದರು. ಕಳೆದ ರಾತ್ರಿ ರೂಂನಲ್ಲಿ ಗೀತಾ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಮೈ ಮೇಲೆ ಪಟ್ರೋಲ್‌ ಸುರಿದುಕೊಂಡು ಗೀತಾ ಬೆಂಕಿ ಹಚ್ಚಿಕೊಂಡಿದ್ದಾರೆ. ಅದೇ ರೂಂನಲ್ಲಿ ಗಿರೀಶ್‌ ಎಂಬ ವ್ಯಕ್ತಿ ಇದ್ದರು. ಇಬ್ಬರು ಒಟ್ಟಿಗೆ ರೂಂಗೆ ಬಂದಿದ್ದರು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

SP Mithun Kumar

ಹೊಟೇಲ್‌ ಸಿಬ್ಬಂದಿ ಸಮಯ ಪ್ರಜ್ಞೆ

ರೂಮಿನಲ್ಲಿ ಗೀತಾ ಬೆಂಕಿ ಹಚ್ಚಿಕೊಂಡು ಅರಚಾಡಿದಾಗ ಹೊಟೇಲ್‌ ಸಿಬ್ಬಂದಿ ತಕ್ಷಣ ದೌಡಾಯಿಸಿದ್ದಾರೆ. ಗೀತಾ ಮತ್ತು ಗಿರೀಶ ಅವರನ್ನು ರಕ್ಷಿಸಿದ್ದಾರೆ. ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದಾರೆ.

ಶೇ.70ರಷ್ಟು ಸುಟ್ಟ ಗಾಯ

ಗೀತಾಗೆ ಶೇ.70ರಷ್ಟು ಸುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ. ಆಸ್ಪತ್ರೆಯ ಎಂಎಲ್‌ಸಿ ವರದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಎಂದು ಬರೆಯಿಸಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಕೂಡಲೆ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆಂಬುಲೆನ್ಸ್‌ ಮೂಲಕ ಗೀತಾ ಅವರನ್ನು ವಿಕ್ಟೋರಿಯ ಆಸ್ಪತ್ರೆ ರವಾನಿಸಲಾಗಿದೆ.

‘ಡೆತ್‌ ನೋಟ್‌’ನಲ್ಲಿ ಏನಿತ್ತು?

ರೂಂಗೆ ಬರುವ ಮೊದಲೆ ಪೆಟ್ರೋಲ್‌ ತಂದಿಟ್ಟುಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೆ ಘಟನೆ ಬಳಿಕ ಗೀತಾ ಅವರ ವ್ಯಾನಿಟಿ ಬ್ಯಾಗ್‌ನಲ್ಲಿ ಎರಡು ಪುಟದ ‘ಡೆತ್‌ ನೋಟ್‌ʼ ಸಿಕ್ಕಿದೆ.

ಡೆತ್‌ ನೋಟ್‌ನಲ್ಲಿ ಯಾರ ಕುರಿತಾಗಿಯು ಆರೋಪ ಮಾಡಿಲ್ಲ. ಆದರೆ ಕೆಲವು ವೈಯಕ್ತಿಕ ಸಮಸ್ಯೆಗಳು ಎಂದು ತಿಳಿಸಿದ್ದಾರೆ. ಡೆತ್‌ ನೋಟ್‌ ಬಗ್ಗೆಯು ತನಿಖೆ ನಡೆಯುತ್ತಿದೆ. ಅದನ್ನು ಗೀತಾ ಅವರೆ ಬರೆದಿದ್ದೋ ಅಥವಾ ಅಲ್ಲವೋ ಎಂದು ಪರಿಶೀಲಿಸಲಾಗುತ್ತಿದೆ. ಪೂರ್ಣ ವಿವರ ನೀಡಲು ಸಾಧ್ಯವಿಲ್ಲ.ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

ಯಾರು ಗೀತಾ? ಶಿವಮೊಗ್ಗಕ್ಕೆ ಬಂದಿದ್ದೇಕೆ?

ಗೀತಾ ದಾವಣಗೆರೆ ಜಿಲ್ಲೆಯವರು. ಶಿವಮೊಗ್ಗದ ಕಾಲೇಜು ಒಂದರಲ್ಲಿ ಅವರ ಪುತ್ರಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹಾಸ್ಟೆಲ್‌ನಲ್ಲಿರುವ ಮಗಳನ್ನು ಮಾತನಾಡಿಸಲು ಗೀತಾ ಆಗಮಿಸಿದ್ದರು. ಮಗಳು ಸಿಗದಿದ್ದರಿಂದ ಆಕೆಗೆ ಮೆಸೇಜ್‌ ಮಾಡಿ, ಬಳಿಕ ಲಾಡ್ಜ್‌ನ ರೂಂಗೆ ಮರಳಿದ್ದರು. ಇನ್ನು, ಗಿರೀಶ್‌ ಕೂಡ ದಾವಣಗೆರೆ ಮೂಲದವರು. ಇಬ್ಬರು ಪರಿಚಿತರು ಎಂದು ತಿಳಿದು ಬಂದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನವೆಂಬರ್‌ 21ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ‌ ಲಿಸ್ಟ್

ಸದ್ಯ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಗೀತಾಗೆ ಚಿಕಿತ್ಸೆ ಮುಂದುವರೆದಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 19, 2025

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

Leave a Comment