ಶಿವಮೊಗ್ಗ: ಡಿವೈಡರ್ ಹಾರಿ ಬಂದ ಇನ್ನೋವಾ (Innova) ಕಾರು ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
ಸವಳಂಗ ರಸ್ತೆಯ ಮತ್ತೋಡು ಮತ್ತು ಅಬ್ಬಲಗೆರೆಯ ಮಧ್ಯೆ ಸಂಜೆ ಘಟನೆ ಸಂಭವಿಸಿದೆ. ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್ ಹಾರಿ ಬಂದಿದೆ. ರಸ್ತೆಯ ಮತ್ತೊಂದು ಬದಿಯಲ್ಲಿ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿ ಹೊಡೆದಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಘಟನೆಯಲ್ಲಿ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಮುಂಭಾಗಕ್ಕು ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಮಹಿಳೆಗೆ 3 ವರ್ಷ, ಯುವಕನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಏನಿದು ಕೇಸ್?



