ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021
ಪೊಲೀಸ್ ಅಧಿಕಾರಿಯೊಬ್ಬರ ಮನೆಯ ಬಾಗಿಲು ಒಡೆದು ಕಳ್ಳತನ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಮನೆಗೆ ನುಗ್ಗಿರುವ ಕಳ್ಳರು, ಹಣ, ಚಿನ್ನದ ಕಾಯಿನ್ ಮತ್ತು ಸಿಸಿಟಿವಿ ಡಿವಿಆರ್ ಕದ್ದೊಯ್ದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇನ್ಸ್’ಪೆಕ್ಟರ್ ಆಗಿರುವ ಮಂಜುನಾಥ್ ಅವರ ಶಿವಮೊಗ್ಗದ ಮನೆಯಲ್ಲಿ ಕಳ್ಳತನವಾಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಮಂಜುನಾಥ್ ಅವರ ಮನೆಯ ಬಾಗಿಲು ಒಡೆದು ಕಳವು ಮಾಡಲಾಗಿದೆ.
ಉಡುಪಿಗೆ ತೆರಳಿದ್ದ ಮಂಜುನಾಥ್ ಅವರು ಕರ್ತವ್ಯ ನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಾಗಿಲು ಒಡೆದು ಮನೆಯಲ್ಲಿದ್ದ ಒಂದು ಲಕ್ಷ ರೂ. ನಗದು, ಏಳು ಗ್ರಾಂ ತೂಕದ ಎರಡು ಬಂಗಾರದ ನಾಣ್ಯ, ಐದು ಸಾವಿರ ಮೌಲ್ಯದ ಸಿಸಿಟಿವಿಯ ಡಿವಿಆರ್ ಕದ್ದೊಯ್ಯಲಾಗಿದೆ.
ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200