ಶಿವಮೊಗ್ಗದ ಲಾಡ್ಜ್‌ಗಳಲ್ಲಿ ದಿಢೀರ್‌ ತಪಾಸಣೆ, ವಿವಿಧ ರಸ್ತೆಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಪೊಲೀಸರು ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದರು. ಲಾಡ್ಜ್‌ಗಳಲ್ಲಿ ಪರಿಶೀಲನೆ ನಡೆಸಲಾಯಿತು. ಇನ್ನು, ವಿವಿಧೆಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆ ನಡೆಸಿದರು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಲಾಡ್ಜ್‌ಗಳಲ್ಲಿ ದಿಢೀರ್‌ ತಪಾಸಣೆ

ಜಿಲ್ಲೆಯ ವಿವಿಧೆಡೆ ಲಾಡ್ಜ್‌ಗಳಿಗೆ ಪೊಲೀಸರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಡ್ಜ್‌ಗಳಲ್ಲಿ ತಂಗಿರುವ ಅಪರಿಚಿತರು ಹಾಗೂ ಸಂಶಯಾಸ್ಪದವಾಗಿ ಕಂಡುಬರುವ ವ್ಯಕ್ತಿಗಳ ಹಿನ್ನೆಲೆಯ ಮಾಹಿತಿ ಪಡೆದರು. ಲಾಡ್ಜ್‌ಗಳ ಗ್ರಾಹಕರ ನೋಂದಣಿ ಪುಸ್ತಕ, ಲೆಡ್ಜರ್, ಸಿಸಿಟಿವಿ ಕ್ಯಾಮೆರಾಗಳ ಸಮರ್ಪಕ ಕಾರ್ಯನಿರ್ವಹಣೆ ಹಾಗೂ ಅಲ್ಲಿ ಅಳವಡಿಸಲಾಗಿರುವ ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಸೂಚನೆಗಳನ್ನು ನೀಡಿದ್ದಾರೆ.

Police-check-lodges-and-vehicles-in-Shimoga

ವಿವಿಧೆಡೆ ಚೆಕ್‌ಪೋಸ್ಟ್‌, ವಾಹನಗಳ ತಪಾಸಣೆ

ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಎಲ್ಲ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಯಿತು.