ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
SHIMOGA : ಬಡ್ಡಿ (Interest) ವ್ಯವಹಾರ ನಡೆಸುತ್ತಿದ್ದವರ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಖಾಲಿ ಚೆಕ್‌ಗಳು, ಪ್ರಾಮಿಸರಿ ನೋಟ್‌ಗಳು, ನಿವೇಶನ ಮತ್ತು ವಾಹನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಗೋಂದಿ ಚಟ್ನಹಳ್ಳಿಯ ಮಹಿಳೆ ಆತ್ಮಹತ್ಯೆ ಪ್ರಕರಣದ ಬೆನ್ನಿಗೆ ದಾಳಿ ನಡೆಸಲಾಗಿದೆ.
ಗ್ರಾಮದ ಅನಿಲ, ರಾಜಣ್ಣ, ಪ್ರಭಣ್ಣ, ವಿಜಯೇಂದ್ರ, ಪ್ರದೀಪ್ ಮತ್ತು ಹಾಲೇಶ್ ಎಂಬುವವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಳಿ ವೇಳೆ 217 ಸಹಿ ಇರುವ ಖಾಲಿ ಚೆಕ್‌ಗಳು, ಪ್ರಾಮಿಸರಿ ನೋಟ್‌ಗಳು, ನಿವೇಶನ ಮತ್ತು ವಾಹನ ದಾಖಲಾತಿ ವಶಕ್ಕೆ ಪಡೆಯಲಾಗಿದೆ.
ಗೋಂದಿ ಚಟ್ನಹಳ್ಳಿಯ ರಂಗನಾಥ್ ಎಂಬುವವರು ಮನೆ ಕಟ್ಟಲು ಆರು ಮಂದಿಯಿಂದ ಪ್ರತಿ ತಿಂಗಳು 3 ಪರ್ಸೆಂಟ್ ಬಡ್ಡಿಯಂತೆ ಸಾಲ ಪಡೆದಿದ್ದರು. ಸಾಲ ಮತ್ತು ಬಡ್ಡಿ ಹಣವನ್ನು ಸಕಾಲದಲ್ಲಿ ನೀಡಲು ಆಗಿರಲಿಲ್ಲ. ಹಾಗಾಗಿ ಸಾಲ ನೀಡಿದ್ದವರು ಸಾಲ ಮತ್ತು ಬಡ್ಡಿ ಕಟ್ಟುವಂತೆ ಮನೆ ಬಳಿ ಬಂದು ಗಲಾಟೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ಪ್ಲಾಸ್ಟಿಕ್ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್ ಹೊರತೆಗೆದ ಉರಗ ರಕ್ಷಕ
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿಗಳಾ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರಿಯಪ್ಪ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ಡಿವೈಎಸ್‌ಪಿ ಸುರೇಶ್, ಇನ್ಸ್‌ಪೆಕ್ಟರ್ ಸತ್ಯನಾರಾಯಣ ನೇತೃತ್ವದಲ್ಲಿ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು. ಬಡ್ಡಿ ದಂಧೆ ನಡೆಸುತ್ತಿರುವವರ ಮಾಹಿತಿ ಇದ್ದಲ್ಲಿ 112ಗೆ ಕರೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





