ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ತಡರಾತ್ರಿ ಘಟನೆ (Incident) ಸಂಭವಿಸಿದೆ.
ಅವಿನಾಶ್ (32) ಕೊಲೆಯಾದವನು. ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ಅವಿನಾಶ್‌ನ ಹತ್ಯೆಯಾಗಿತ್ತು. ಬೆಳಗ್ಗೆ ದಾರಿಯಲ್ಲಿ ಹೋಗುವವರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.
ಕೊಲೆ ಪ್ರಕರಣವೊಂದರಲ್ಲಿ ಅವಿನಾಶ್ ಜೈಲುಪಾಲಾಗಿದ್ದ. ಉಚ್ಛ ನಾಯಾಲಯದಲ್ಲಿ ಜಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಜೀವನ ನಿರ್ವಹಣೆಗೆ ಟೈಲ್ಸ್ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮನೆಯಿಂದ ಹೊರ ಹೋಗಿದ್ದ ಅವಿನಾಶ್ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.
ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್‌ಪಿ ಸಂಜೀವ್ ಕುಮಾರ್, ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




ಇದನ್ನೂ ಓದಿ » ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200