ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 NOVEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಚಿಕ್ಕಲ್ನಲ್ಲಿ ಕಳೆದ ರಾತ್ರಿ ನಡೆದ ಹತ್ಯೆ ಪ್ರಕರಣದ ತನಿಖೆ ಬಿರುಸುಗೊಂಡಿದೆ. ವೈಯಕ್ತಿಕ ಕಾರಣಕ್ಕೆ ಮಲ್ಲೇಶ್ (35) ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹೇಗಾಯ್ತು ಘಟನೆ?
ಬೈಕ್ನಲ್ಲಿ ತೆರಳುತ್ತಿದ್ದ ಮಲ್ಲೇಶ್ ಮೇಲೆ ಮತ್ತೊಂದು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಮಲ್ಲೇಶ್ ಕುತ್ತಿಗೆ ಮತ್ತು ಹೊಟ್ಟೆಗೆ ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಸ್ಕೆಚ್, ರಾಡ್, ಲಾಂಗ್, ಖಾರದ ಪುಡಿ ಸಹಿತ ಸಿಕ್ಕಿಬಿತ್ತು ಗ್ಯಾಂಗ್
ಕೊಲೆಗೆ ಕಾರಣವಾದಳ ಗರ್ಲ್ ಫ್ರೆಂಡ್?
ವಿಷಯ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುತ್ತಲು ಬ್ಯಾರಿಕೇಡ್ ಅಳವಡಿಸಿದರು. ಆಂಬುಲೆನ್ಸ್ ಮೂಲಕ ಮಲ್ಲೇಶ್ನನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಇದ ವೇಳೆ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಪ್ರಾಥಮಿಕ ಮಾಹಿತಿ ಪ್ರಕಾರ ವೈಯಕ್ತಿಕ ಕಾರಣಕ್ಕೆ ಘಟನೆ ಸಂಭವಿಸಿದೆ. ಗರ್ಲ್ಫ್ರೆಂಡ್ ವಿಚಾರಕ್ಕೆ ಕೊಲೆಯಾಗಿರುವ ಶಂಕೆ ಇದೆ. ಹೆಚ್ಚಿನ ತನಿಖೆ ಬಾಕಿ ಇದೆ ಎಂದು ತಿಳಿಸಿದ್ದಾರೆ.