ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 16 AUGUST 2024 : ಜನ ಸಂದಣಿ ಹೆಚ್ಚಿರುವ ರಸ್ತೆಯಲ್ಲೇ ಪಾರ್ಕಿಂಗ್ ಮಾಡಿದ್ದ ಕಾರಿನ ಗಾಜು ಒಡೆದು ಐ ಪ್ಯಾಡ್ (iPAD) ಕಳವು ಮಾಡಲಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇಎಸ್‌ಐ ಮೆಡಿಕಲ್ ಆಫೀಸರ್ ರಾಕೇಶ್ ಎಂಬುವವರಿಗೆ ಸೇರಿದ 60 ಸಾವಿರ ರೂ. ಮೌಲ್ಯದ ಐಪ್ಯಾಡ್ ಕಳ್ಳತನವಾಗಿದೆ. ರಾಕೇಶ್ ಅವರು ಗಾಂಧಿ ಪಾರ್ಕ್ ಪಕ್ಕದಲ್ಲಿರುವ ಶೌಚಾಲಯದ ಸನಿಹ ಕಾರು ನಿಲ್ಲಿಸಿದ್ದರು. ಶೂ ಹೊಲಿಸಿಕೊಳ್ಳಲು ಹೋಗಿದ್ದರು. ಮರಳಿ ಬಂದಾಗ ಕಾರಿನ ಎಡಗಡೆಯ ಹಿಂಬದಿಯ ಗಾಜು ಒಡೆದಿತ್ತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪರಿಶೀಲಿಸಿದಾಗ ಕಾರಿನ ಸೀಟ್ ಮೇಲಿಟ್ಟಿದ್ದ ಬ್ಯಾಗ್‌ನಲ್ಲಿದ್ದ ಐ ಪ್ಯಾಡ್ ಕಳುವಾಗಿತ್ತು. ತಮ್ಮ ಕೆಲಸಕ್ಕೆ ಸಂಬಂಧಿಸಿದ ಮಾಹಿತಿಗಳು ಇದ್ದರಲ್ಲಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್ ತಾಣಗಳು, ಇಲ್ಲಿದೆ ಲಿಸ್ಟ್