SHIVAMOGGA LIVE NEWS | 9 APRIL 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂಜಿನಿಯರ್ ಒಬ್ಬರಿಗೆ ಸೇರಿದ ಲ್ಯಾಪ್‌ಟಾಪ್ ಕಳ್ಳತನವಾಗಿದೆ. ಬೆಂಗಳೂರಿನಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಶಿವಮೊಗ್ಗ ನಿಲ್ದಾಣಕ್ಕೆ ಬಂದು ನಿಂತಾಗ ಘಟನೆ ಸಂಭವಿಸಿದೆ.
ಲಕ್ಷ್ಮಿ ಮಹಾಬಲೇಶ್ವರ ಎಂಬುವವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಡೆವಲಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಿಂದ ಉತ್ತರ ಕನ್ನಡಕ್ಕೆ ಬಸ್ಸಿನಲ್ಲಿ ತೆರಳುತ್ತಿದ್ದರು. ತಮ್ಮ ಸೀಟಿನ ಪಕ್ಕದಲ್ಲಿ ಲ್ಯಾಪ್‌ಟಾಪ್ ಬ್ಯಾಗ್ ಇರಿಸಿಕೊಂಡಿದ್ದರು. ಬಸ್ಸು ಬೆಳಗಿನ ಜಾವ 4.30ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಿತ್ತು. ಈ ವೇಳೆ ಲಕ್ಷ್ಮಿ ಮಹಾಬಲೇಶ್ವರ ಅವರು ನಿದ್ರೆಗೆ ಜಾರಿದ್ದರು. 15 ನಿಮಿಷದ ಬಳಿ ಬಸ್ ಹೊರಟಿದ್ದು ನಿಲ್ದಾಣದಿಂದ ಹೊರ ಬಂದಾಗ ಎಚ್ಚರವಾಗಿದೆ. ಪಕ್ಕದ ಸೀಟಿನಲ್ಲಿದ್ದ ಬ್ಯಾಗ್ ಇರಲಿಲ್ಲ ಎಂದು ಆರೋಪಿಸಿದಾರೆ.
ಬ್ಯಾಗ್‌ನಲ್ಲಿ ಒಂದು ಲ್ಯಾಪ್‌ಟಾಪ್, ಕಂಪನಿಯ ಐಡಿ ಕಾರ್ಡ್, ಐ ಫೋನ್ ಮೊಬೈಲ್ ಇತ್ತು ದೂರು ನೀಡಿದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ, ಕಾರಣವೇನು? ಯಾವಾಗ ಜಾರಿಯಾಗುತ್ತೆ?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






