ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | IPL BETTING | 27 ಏಪ್ರಿಲ್ 2022
IPL ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಬೀಡಾ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಳೆಹೊನ್ನೂರು ಸಮೀಪದ ಅಶೋಕನಗರದಲ್ಲಿ ಐಪಿಎಲ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಯುವಕನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರದ ಬೀಡಾ ಅಂಗಡಿ ಮಾಲೀಕ ಮಂಜುನಾಥ ಬಂಧಿತ.
ಮಂಜುನಾಥ ಬೆಟ್ಟಿಂಗ್ ಹಣವನ್ನು ಕಮಿಷನ್ ಆಧಾರದಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹಸ್ತಾಂತರಿಸುವ ವ್ಯವಹಾರ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಬೆಟ್ಟಿಂಗ್ ಹಣದ ವ್ಯವಹಾರದಲ್ಲಿ ಈತನ ಅಂಗಡಿ ಎದುರು ಪದೇ ಪದೆ ಜಗಳ ಆಗುತ್ತಿತ್ತು. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಹೊಳೆಹೊನ್ನೂರು ಪೊಲೀಸರು ಆರೋಪಿ ಮಂಜುನಾಥನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಹೊನ್ನಾಳಿ ಸೇತುವೆ ಮೇಲೆ ಯುವಕನ ಮೂಗಿಗೆ ಪಂಚ್, ಕತ್ತು ಹಿಸುಕಿ ಕೊಲೆಗೆ ಯತ್ನ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422