ಶಿವಮೊಗ್ಗ ಲೈವ್.ಕಾಂ | SHIMOGA NEWS | 4 NOVEMBER 2020
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತಿಲಕ್ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ, ಮೊಬೈಲ್ ಆಂಗಡಿ ಒಂದರಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಯಾರೆಲ್ಲ ಬಂಧನಕ್ಕೆ ಒಳಗಾಗಿದ್ದಾರೆ?
ಪ್ರಕರಣಕ್ಕೆ ಸಂಬಂಧಿಸಿದಂತ ಮೊಬೈಲ್ ಅಂಗಡಿ ಮಾಲೀಕ ಅಜೇಯ (35) ಕಿರಣ (32) ಸಂದೀಪ್ (28) ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]