ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 APRIL 2023
SHIMOGA : ಹಳೆ ದ್ವೇಷದ ಹಿನ್ನೆಲೆ ಇಬ್ಬರು ಯುವಕರಿಗೆ ಚಾಕು ಚುಚ್ಚಿ, ನಾಲ್ವರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಕಠಿಣ ಜೈಲು ಶಿಕ್ಷೆ (Jail), ದಂಡ ವಿಧಿಸಲಾಗಿದೆ. ಐವರು ಆರೋಪಿಗಳಿಗೆ ಜೈಲು ಶಿಕ್ಷೆಯಾಗಿದೆ.

ಏನಿದು ಕೇಸ್?
2018ರ ಜನವರಿ 21ರಂದು ಶಿವಮೊಗ್ಗದ ಕೊರಮರ ಕೇರಿಯ ವಿಜಯ್ ಕುಮಾರ್, ಪ್ರವೀಣ್, ನವೀನ, ಚೇತನ್ ಮತ್ತು ಸಂತೋಷ್ ಎಂಬುವವರು ಹಳೆ ದ್ವೇಷದ ಹಿನ್ನೆಲೆ ಗೋವಿಂದಾಪುರದ ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಗೋವಿಂದಾಪುರದ ನವೀನ್ ಮತ್ತು ನಿತಿನ್ ಎಂಬುವವರ ಮೇಲೆ ಚಾಕುವಿನಿಂದ ಹೊಟ್ಟೆ ಮತ್ತು ಪಕ್ಕೆಗೆ ಚುಚ್ಚಿದ್ದರು. ಗೋಪಿ, ಲೋಹಿತ್, ಪ್ರಜ್ವಲ್ ಮತ್ತು ರಾಜು ಎಂಬುವವರಿಗೆ ದೊಣ್ಣೆಯಿಂದ ಹೊಡೆದಿದ್ದರು. ಘಟನೆ ಸಂಬಂಧ ನವೀನ್ ಎಂಬಾತ ತುಂಗಾ ನಗರ ಠಾಣೆಯಲ್ಲಿ ದೂರು ನೀಡಿದ್ದ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
ಕಠಿಣ ಜೈಲು ಶಿಕ್ಷೆ
ತನಿಖೆ ನಡೆಸಿದ ತುಂಗಾ ನಗರ ಠಾಣೆಯ ಹಿಂದಿನ ಸಬ್ ಇನ್ಸ್‍ಪೆಕ್ಟರ್ ಬಿ.ಸಿ.ಗಿರೀಶ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್.ಮಾನು ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಕೊರಮರ ಕೇರಿಯ ವಿಜಯ್ ಕುಮಾರ್, ಪ್ರವೀಣ್, ನವೀನ್, ಚೇತನ್ ಮತ್ತು ಸಂತೋಷ್ಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 65 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ತಪ್ಪಿದರೆ 3 ತಿಂಗಳು ಸಾದಾ ಜೈಲು (Jail) ಶಿಕ್ಷೆ ವಿಧಿಸಲು ಆದೇಶಿಸಲಾಗಿದೆ.
ಸರ್ಕಾರಿ ಅಭಿಯೋಜಕ ಶಾಂತರಾಜ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



