ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
CRIME NEWS, 11 NOVEMBER 2024 : ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಒಂದೂವರೆ ವರ್ಷ ಜೈಲು (Jail) ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗದ 2ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಏನಿದು ಪ್ರಕರಣ?
2016ರಲ್ಲಿ ಶಿವಮೊಗ್ಗದ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಯುವತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಆಕೆಯ ಫೋಟೊಗಳನ್ನು ಇಟ್ಟುಕೊಂಡು, ದೂರು ನೀಡಿದರೆ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಒಡ್ಡಿದ್ದ ಎಂದು ಆರೋಪಿಸಿ ಯುವತಿಯು, ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಳು.
ಜೈಲು ಶಿಕ್ಷೆ, ದಂಡ ವಿಧಿಸಿದ ಕೋರ್ಟ್
ತನಿಖೆ ನಡೆಸಿದ ಆಗಿನ ಕೋಟೆ ಠಾಣೆ ಇನ್ಸ್‌ಪೆಕ್ಟರ್ ಚಂದ್ರಪ್ಪ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 2ನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾ. ಶಾರದಾ ಕೊಪ್ಪದ ಅವರು ಅಪರಾಧ ಸಾಬೀತಾದ ಹಿನ್ನೆಲೆ 62 ವರ್ಷದ ವ್ಯಕ್ತಿಗೆ ಶಿಕ್ಷೆ ಪ್ರಮಾಣ ಪ್ರಟಿಸಿದ್ದಾರೆ. ದಂಡದ ಮೊತ್ತದಲ್ಲಿ 36 ಸಾವಿರ ರೂ. ಹಣವನ್ನು ನೊಂದ ಮಹಿಳೆಗೆ ನೀಡಲು ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಕಿರಣ್ ಕುಮಾರ್ ವಾದಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿಯಲ್ಲಿ ಉದ್ಯೋಗವಕಾಶವಿದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422