ತೀರ್ಥಹಳ್ಳಿಯಲ್ಲಿ ಸಿಕ್ಕಿಬಿದ್ದಿದ್ದ ಪಶ್ಚಿಮ ಬಂಗಾಳದ ಐವರಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ತೀರ್ಥಹಳ್ಳಿಯ ವಿಠಲನಗರದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಪಶ್ಚಿಮ ಬಂಗಾಳದ ಐವರಿಗೆ ಶಿವಮೊಗ್ಗದ ನ್ಯಾಯಾಲಯ ನಾಲ್ಕು ವರ್ಷ ಕಠಿಣ ಜೈಲು (Jail) ಶಿಕ್ಷೆ, ₹25 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಪಶ್ಚಿಮ ಬಂಗಾಳದ ಅಲೋಕ್‌ ಮಂಡಲ್‌ (34), ಶ್ರೀಬಾಷ್‌ ಸರ್ಕಾರ್‌ (20), ಅಮ್ರಿತ ಮಂಡಲ್‌ (27), ಸಂಕರ್‌ ಬ್ಯಾಪಾರಿ (28), ಹರಧನ್‌ ಮಂಡಲ್‌ (32) ಬಂಧಿತರು.

ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ

2022ರ ಜುಲೈ 12ರಂದು ತೀರ್ಥಹಳ್ಳಿಯ ವಿಠಲನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ಇವರ ಬಳಿ 1 ಕೆ.ಜಿ 564 ಗ್ರಾಂ ಗಾಂಜಾ ಪತ್ತೆಯಾಗಿತ್ತು. ನಗದು ₹3550, 5 ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga-Court-Balaraja-Urs-Road

ತನಿಖೆ ನಡೆಸಿದ್ದ ಆಗಿನ ಇನ್ಸ್‌ಪೆಕ್ಟರ್‌ ಅಶ್ವಥ ಗೌಡ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ.ಮಂಜುನಾಥ ನಾಯಕ್‌ ವಿಚಾರಣೆ ನಡೆಸಿದ್ದರು. ಸರ್ಕಾರಿ ಅಭಿಯೋಜಕ ಸುರೇಶ್‌ ಕುಮಾರ್‌ ವಾದ ಮಂಡಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment