ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 MAY 2023
SHIMOGA : ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಪೋಸ್ಟ್ ಮಾಡಿದ್ದ ಮಹಿಳೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ.
ಭದ್ರಾವತಿಯ ಮಹಿಳೆಗೆ ಶಿಕ್ಷೆ
ಹಳೆ ದ್ವೇಷದ ಹಿನ್ನೆಲೆ ಭದ್ರಾವತಿಯ 30 ವರ್ಷದ ಮಹಿಳೆಯೊಬ್ಬಳು 6 ವರ್ಷದ ಬಾಲಕಿ, ಆಕೆಯ ಕಟುಂಬದ ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಪ್ರಕಟಿಸಿದ್ದಳು. ಈ ಸಂಬಂಧ ಬಾಲಕಿಯ ತಾಯಿ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಆರೋಪ ಸಾಬೀತು, ಜೈಲು, ದಂಡ
ಪ್ರಕರಣದ ತನಿಖೆ ನಡೆಸಿ ಭದ್ರಾವತಿ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ಮಹಿಳೆಗೆ 10 ತಿಂಗಳು ಜೈಲು, 60 ಸಾವಿರ ರೂ. ದಂಡ ವಿಧಿಸಲಾಗಿದೆ. ಸರ್ಕಾರದ ಪರವಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.
ಇದನ್ನೂ ಓದಿ – ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಹೊರ ಬಂದ ಕಾಂಗ್ರೆಸ್ ಹಿರಿಯ ನಾಯಕಿಗೆ ಕಾದಿತ್ತು ಶಾಕ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422