ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 14 SEPTEMBER 2024 : ಜಮೀನಿಗೆ ತೆರಳುವ ಜಾಗದ ವಿಚಾರದಲ್ಲಿ ಉಂಟಾದ ಜಗಳದಲ್ಲಿ (Altercation) ವೃದ್ಧರೊಬ್ಬರಿಗೆ ಗುಂಡು ಹಾರಿಸಿ ಗಾಯಗೊಳಿಸಿದ್ದ ವ್ಯಕ್ತಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಜಟ್ಟಿನಮಕ್ಕಿ ಗ್ರಾಮದ ಅಶೋಕ (62) ಶಿಕ್ಷೆಗೆ ಒಳಗಾದವನು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
2018ರ ಏಪ್ರಿಲ್ 23ರಂದು ಜಟ್ಟಿನಮಕ್ಕಿಯ ಕೃಷ್ಣಮೂರ್ತಿ (64) ಮೇಲೆ ಗುಂಡು ಹಾರಿಸಿದ್ದನು. ಕೃಷ್ಣಮೂರ್ತಿ ಅವರ ಕತ್ತಿನ ಭಾಗಕ್ಕೆ ಗುಂಡು ತಗುಲಿ ತೀವ್ರ ಸ್ವರೂಪದ ಗಾಯವಾಗಿತ್ತು. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತೀರ್ಥಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ದೃಢಪಟ್ಟ ಹಿನ್ನೆಲೆ ಶಿಕ್ಷೆ ವಿಧಿಸಿದೆ.
ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 5 ತಿಂಗಳು ಸಾದಾ ಸೆರೆವಾಸ ಶಿಕ್ಷೆ ಅನುಭವಿಸುವಂತೆ ಹಾಗೂ ದಂಡದ ಮೊತ್ತದಲ್ಲಿ ಕೃಷ್ಣಮೂರ್ತಿ ಅವರಿಗೆ ಪರಿಹಾರ ರೂಪದಲ್ಲಿ 25 ಸಾವಿರ ರೂ. ನೀಡುವಂತೆ ಆದೇಶಿಸಿದೆ. ಸರ್ಕಾರದ ಪರವಾಗಿ ವಕೀಲ ಎ.ಎಂ.ಸುರೇಶ್ ಕುಮಾರ್ ವಾದ ಮಂಡಿಸಿದ್ದರು.
ಇದನ್ನೂ ಓದಿ » 70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?