ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಕರೋನ ಪಾಸಿಟಿವ್ ಆಗಿ ಗುಣವಾಗಿದ್ದ ಖೈದಿಯೊಬ್ಬ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ. ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದ ಹಿನ್ನೆಲೆ ಈತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇಸ್ಮಾಯಿಲ್ ಖಾನ್ (72) ಮೃತ ಖೈದಿ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿ. ಖಜಾನೆ ಅಧಿಕಾರಿಯಾಗಿದ್ದ ಇಸ್ಮಾಯಿಲ್ ಖಾನ್ ನಿವೃತ್ತರಾಗಿದ್ದರು. ಆದರೆ ಇದಕ್ಕೂ ಮುನ್ನ ಇವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಏಪ್ರಿಲ್ 5ರಂದು ಒಂದು ವರ್ಷ ಜೈಲು ಶಿಕ್ಷೆ, 1.5 ಲಕ್ಷ ದಂಡ ವಿಧಿಸಿತ್ತು.
ಜೈಲಿಗೆ ಬರುತ್ತಿದ್ದಂತೆ ಕರೋನ ಪಾಸಿಟಿವ್
ಇಸ್ಮಾಯಿಲ್ ಖಾನ್ ಜೈಲಿಗೆ ಬರುತ್ತಿದ್ದಂತೆ ಕರೋನ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿದ್ದ. ಕೋವಿಡ್‍ನಿಂದ ಗುಣವಾಗಿ ಮತ್ತೆ ಜೈಲಿಗೆ ಬಂದಿದ್ದ ಇಸ್ಮಾಯಿಲ್ ಖಾನ್ ಆರೋಗ್ಯದಲ್ಲಿ ಪುನಃ ಏರುಪೇರಾಗಿತ್ತು. ಮೇ 24ರಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವತ್ತು ಹೃದಯಾಘಾತದಿಂದ ಇಸ್ಮಾಯಿಲ್ ಖಾನ್ ಸಾವು ಸಂಭವಿಸಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















