ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ಬುಲೆಟ್ ಕ್ಯಾಮರಾ ಮತ್ತು ಟ್ಯೂಬ್ ಲೈಟ್’ಗಳಿಗೆ ಹಾನಿ ಮಾಡಿದ್ದಾನೆ. ಆತನ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಾವತಿ ನಗರದ ಗಗನ್ ಅಲಿಯಾಸ್ ಆನಂದ ಎಂಬ ವಿಚಾರಣಾಧೀನ ಖೈದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಹೇಗಾಯ್ತು ಘಟನೆ?
ಕೇಂದ್ರ ಕಾರಾಗೃಹದ ಶರಾವತಿ ವಿಭಾಗದಲ್ಲಿ ಖೈದಿಗಳು ಮತ್ತು ಸೆಲ್’ಗಳಲ್ಲಿ ದೈನಂದಿನ ತಪಾಸಣೆ ನಡೆಸಲಾಗುತ್ತಿತ್ತು. ಅನಧಿಕೃತ ವಸ್ತುಗಳು ತಂದಿಟ್ಟುಕೊಳ್ಳುವುದನ್ನು ತಡೆಯಲು ಜೈಲು ಸಿಬ್ಬಂದಿ ತಪಾಸಣೆ ಮಾಡುತ್ತಿದ್ದರು. ಆಗ ದಾಂಧಲೆ ಶುರು ಮಾಡಿದ ವಿಚಾರಣಾಧೀನ ಕೈದಿ ಗಗನ್, ಶರಾವತಿ ವಿಭಾಗದಲ್ಲಿದ್ದ 5 ಬುಲೆಟ್ ಕ್ಯಾಮರಾಗಳು ಮತ್ತು ಟ್ಯೂಬ್ ಲೈಟ್ ಗಳನ್ನು ಒಡೆದು ಹಾಕಿದ್ದಾನೆ.
ಸರ್ಕಾರದ ಆಸ್ತಿ ಹಾನಿಗೊಳಿಸಿದ ಹಿನ್ನೆಲೆ ಜೈಲು ಸಿಬ್ಬಂದಿ, ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ರಾತ್ರೋರಾತ್ರಿ ಪೊಲೀಸರಿಂದ ದಾಳಿ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





