ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 22 DECEMBER 2024
Jan Shatabdi
ಶಿವಮೊಗ್ಗ : ಬೈಪಾಸ್ ರಸ್ತೆ ಸಮೀಪದ ಸೂಳೆಬೈಲ್‌ನಲ್ಲಿ ಟಿವಿ ರಿಮೋಟ್ ಸಿಗಲಿಲ್ಲವೆಂಬ ಕಾರಣಕ್ಕೆ 16 ವರ್ಷದ ಬಾಲಕಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಿವಾಸಿ ಸಹನಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮನೆಯಲ್ಲಿ ರಿಮೋಟ್ ಸಿಗಲಿಲ್ಲವೆಂಬ ಕಾರಣಕ್ಕೆ ಬಾಲಕಿ ಇಲಿ ಪಾಶಾಣ ಸೇವಿಸಿದ್ದಳು. ಅಸ್ವಸ್ಥಗೊಂಡಿದ್ದ ಆಕೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಟಿವಿ ರಿಮೋಟ್‌ಗಾಗಿ ವಿಷ ಸೇವಿಸಿದ ಬಾಲಕಿ
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು
ಶಿವಮೊಗ್ಗ : ನಗರದ ಶೇಷಾದ್ರಿಪುರಂ ಸಾಮಿಲ್ ಬಳಿ ಜನಶತಾಬದ್ಧಿ ರೈಲಿಗೆ ಸಿಲುಕಿ ನಿವೃತ್ತ ನೌಕರರೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಿಕ್ಕನರಸಯ್ಯ (70) ಆತ್ಮಹತ್ಯೆ ಮಾಡಿಕೊಂಡವರು. ಚಿಕ್ಕನರಸಯ್ಯ ಸರ್ಕಾರಿ ಕೆಲಸದಿಂದ ನಿವೃತ್ತರಾಗಿದ್ದರು. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜನತಶಾಬ್ದಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು
ಇದನ್ನೂ ಓದಿ » ಅಮಿತ್ ಷಾ ವಿರುದ್ಧ ಶಿವಮೊಗ್ಗದಲ್ಲಿ ಮುಂದುವರೆದ ಆಕ್ರೋಶ
ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿದೆ. ತಾಲೂಕಿನ ಆಗುಂಬೆ ಸಮೀಪದ ಕೊಳಿಗೆ ಬಿಳುವೆಮನೆ ತಿರುವಿನಲ್ಲಿ ಘಟನೆ ಸಂಭವಿಸಿದೆ. ಕಾರು ಮಣಿಪಾಲದಿಂದ ಶಿವಮೊಗ್ಗ ಕಡೆಗೆ ತೆರಳುವಾಗ ಅಪಘಾತಕ್ಕೀಡಾಗಿದ್ದಾರೆ. ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಆಗುಂಬೆ ಬಳಿ ಕಾರು ಅಪಘಾತ
ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ, ಎಷ್ಟಿರುತ್ತೆ ತಾಪಮಾನ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422