ಎಂಟು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಗರದ ಜಾಫರ್ ಬೇಗ್ ಎಂಬುವ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಉಷಾ ನರ್ಸಿಂಗ್ ಹೋಮ್ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಿತ್ತುಕೊಂಡು ಹೋಗಿದ್ದ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಫರ್‌ ಬೇಗ್‌ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿತ್ತು. ಜಯನಗರ ಠಾಣೆಯ ಪೊಲೀಸ್‌ ಅಧಿಕಾರಿಗಳಾದ ಹೇಮಲತಾ ಮತ್ತು ಎಸ್. ಚಂದ್ರು ಆರೋಪಿಯನ್ನು ಬಂಧಿಸಿದ್ದಾರೆ.

140823-Jayanagara-Police-Station