ಶಿವಮೊಗ್ಗ ಲೈವ್.ಕಾಂ |SHIMOGA NEWS | 26 NOVEMBER 2020
ನಕಲಿ ದಾಖಲೆಗಳನ್ನು ನೀಡಿ, ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಿಂದ ಯಂತ್ರೋಪಕರಣಗಳನ್ನು ತೆಗೆದುಕೊಂಡು ಹೋಗಿ ವಂಚಿಸಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಂಚನೆ ಆಗಿದ್ದು ಹೇಗೆ?
ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಕಚೇರಿಯ ಸಿಬ್ಬಂದಿ ಎಂದು ಹೇಳಿಕೊಂಡು, ನಕಲಿ ದಾಖಲೆಗಳನ್ನು ಒದಗಿಸಿ ದುರ್ಗಿಗುಡಿಯ ಇಮ್ಯಾಜಿನ್ ಟೆಕ್ನಾಲಜಿಸ್ ಮತ್ತು ವೆಂಕಟೇಶನಗರದ ಹೈಟೆಕ್ ಸಲ್ಯೂಷನ್ ಅಂಗಡಿಗಳಿಂದ ವ್ಯಕ್ತಿಯೊಬ್ಬ ಎಲೆಕ್ಟ್ರಾನಿಕ್ ಯಂತ್ರೋಪಕರಣಗಳನ್ನು ಕೊಂಡೊಯ್ದಿದ್ದ. ಆ ಬಳಿಕ ಅತನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಹಾಗಾಗಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಿಕ್ಕಿಬಿದ್ದ ಖತರ್ನಾಕ್ ಕಳ್ಳ
ತನಿಖೆ ನಡೆಸಿದ ಪೊಲೀಸರಿಗೆ ಶಿವಮೊಗ್ಗ ಸಾಗರ ರಸ್ತೆಯ ಯುಟಿಪಿ ಕಾಲೋನಿಯ ನಾಗೇಶ್ (50) ಸಿಕ್ಕಿಬಿದ್ದಿದ್ದಾನೆ. ಈತನಿಂದ 5 ಪ್ರಿಂಟರ್, 6 ಬ್ಯಾಟರಿ, 2 ಯುಪಿಎಸ್, 2 ಜೆರಾಕ್ಸ್ ಮಿಷನ್ ಸೆಟ್ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 4.15 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಕೋಟೆ ಠಾಣೆ ಸಿಪಿಐ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಜಯನಗರ ಠಾಣೆ ಪಿಎಸ್ಐ ರಾಹತ್ ಅಲಿ, ಸಿಬ್ಬಂದಿಗಳಾದ ಜ್ಯೋತಿ, ಮೋಹನ್ ಕುಮಾರ್, ಚಂದನ್ ನಾಯ್ಕ, ಪ್ರಕಾಶ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]