ನಕಲಿ ದಾಖಲೆ ಕೊಟ್ಟು ನಾಲ್ಕು ಲಕ್ಷದ ಜೆರಾಕ್ಸ್ ಮಿಷಿನ್, ಪ್ರಿಂಟರ್, ಯುಪಿಎಸ್ ಕೊಂಡೊಯ್ದಿದ್ದ ವಂಚಕ ಅರೆಸ್ಟ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 26 NOVEMBER 2020

ನಕಲಿ ದಾಖಲೆಗಳನ್ನು ನೀಡಿ, ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಿಂದ ಯಂತ್ರೋಪಕರಣಗಳನ್ನು ತೆಗೆದುಕೊಂಡು ಹೋಗಿ ವಂಚಿಸಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಂಚನೆ ಆಗಿದ್ದು ಹೇಗೆ?

ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಕಚೇರಿಯ ಸಿಬ್ಬಂದಿ ಎಂದು ಹೇಳಿಕೊಂಡು, ನಕಲಿ ದಾಖಲೆಗಳನ್ನು ಒದಗಿಸಿ ದುರ್ಗಿಗುಡಿಯ ಇಮ್ಯಾಜಿನ್ ಟೆಕ್ನಾಲಜಿಸ್ ಮತ್ತು ವೆಂಕಟೇಶನಗರದ ಹೈಟೆಕ್ ಸಲ್ಯೂಷನ್‍ ಅಂಗಡಿಗಳಿಂದ ವ್ಯಕ್ತಿಯೊಬ್ಬ ಎಲೆಕ್ಟ್ರಾನಿಕ್ ಯಂತ್ರೋಪಕರಣಗಳನ್ನು ಕೊಂಡೊಯ್ದಿದ್ದ. ಆ ಬಳಿಕ ಅತನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಹಾಗಾಗಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Jayanagara Police Station 1 1

ಸಿಕ್ಕಿಬಿದ್ದ ಖತರ್ನಾಕ್ ಕಳ್ಳ

ತನಿಖೆ ನಡೆಸಿದ ಪೊಲೀಸರಿಗೆ ಶಿವಮೊಗ್ಗ ಸಾಗರ ರಸ್ತೆಯ ಯುಟಿಪಿ ಕಾಲೋನಿಯ ನಾಗೇಶ್ (50) ಸಿಕ್ಕಿಬಿದ್ದಿದ್ದಾನೆ. ಈತನಿಂದ 5 ಪ್ರಿಂಟರ್‍, 6 ಬ್ಯಾಟರಿ, 2 ಯುಪಿಎಸ್, 2 ಜೆರಾಕ್ಸ್ ಮಿಷನ್ ಸೆಟ್ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 4.15 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಕೋಟೆ ಠಾಣೆ ಸಿಪಿಐ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಜಯನಗರ ಠಾಣೆ ಪಿಎಸ್ಐ ರಾಹತ್ ಅಲಿ, ಸಿಬ್ಬಂದಿಗಳಾದ ಜ್ಯೋತಿ, ಮೋಹನ್ ಕುಮಾರ್, ಚಂದನ್ ನಾಯ್ಕ, ಪ್ರಕಾಶ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment