ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020
ಶಿವಮೊಗ್ಗದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಇಸ್ಪೀಟು ಜೂಜಾಡುತ್ತಿದ್ದ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 1.20 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಪಾರ್ಕ್ ಬಡಾವಣೆಯ ತಿರುಮಲ ಲಾಡ್ಜ್‍ನ ರೂಂ ಒಂದರಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಜಯನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 1,20,260 ರೂ. ನಗದು, 8 ಮೊಬೈಲ್ ಫೋನ್, 7 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಜೂಜಾಡುತ್ತಿದ್ದ ಎಂಟು ಆರೋಪಿಗಳ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆ ಸರ್ಕಲ್ ಇನ್ಸ್‍ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ, ಪಿಎಸ್ಐ ರಹಮತ್ ಅಲಿ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















