ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ KSRTC ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಮುಂದುವರೆದಿವೆ. ಈವರೆಗು ಒಂದೊಂದೆ ಚೈನ್ ಕಳ್ಳತನ ಮಾಡುತ್ತಿದ್ದ ಖದೀಮರು ಈಗ ಭಾರಿ ಮೊತ್ತದ ಚಿನ್ನಾಭರಣ ಕಳವು ಮಾಡಿದ್ದಾರೆ.
ಹೇಗಾಯ್ತು ಕಳ್ಳತನ?
ಬಸ್ ಹತ್ತುವ ಭರಾಟೆಯಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಪರ್ಸ್ ಕಳ್ಳತನ ಮಾಡಲಾಗಿದೆ. ಪರ್ಸ್‌ನಲ್ಲಿದ್ದ ಸುಮಾರು 179 ಗ್ರಾಂ ಚಿನ್ನಾಭರಣ ಹಾಗೂ ₹35,000 ನಗದು ಸೇರಿ ಒಟ್ಟು ₹8,57,047 ಮೌಲ್ಯದ ವಸ್ತುಗಳು ಕಳುವಾಗಿದೆ. ಈ ಸಂಬಂಧ ಭದ್ರಾವತಿ ತಾಲೂಕು ಆನವೇರಿಯ ವಾಸಂತಿ ಎಂಬುವವರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?
ಏಪ್ರಿಲ್ 4ರಂದು ವಾಸಂತಿ ಅವರು ಮಗಳೊಂದಿಗೆ ಶಿವಮೊಗ್ಗದಿಂದ ಸಾಗರಕ್ಕೆ ಹೋಗಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಸಾಗರಕ್ಕೆ ತೆರಳುವ ಬಸ್ ಹತ್ತುವ ವೇಳೆ ವಿಪರೀತ ಜನದಟ್ಟಣೆ ಇತ್ತು. ಈ ವೇಳೆ ಅವರ ಹೆಗಲಿಗಿದ್ದ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಸಣ್ಣ ಪರ್ಸ್ ಕಳ್ಳತನವಾಗಿದೆ.

ಬಸ್ ಹತ್ತಿದ ಬಳಿಕ ಕಂಡಕ್ಟರ್ ಬಳಿ ಟಿಕೆಟ್ ಪಡೆಯಲು ಹೋದಾಗ ಕಳ್ಳತನವಾಗಿರುವುದು ವಾಸಂತಿ ಅವರ ಗಮನಕ್ಕೆ ಬಂದಿದೆ. ಕೂಡಲೇ ಬಸ್‌ನಲ್ಲಿ ಹುಡುಕಾಡಿದರೂ ಪರ್ಸ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಧಗಧಗ ಹೊತ್ತಿ ಉರಿದ ಡಸ್ಟರ್ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

LATEST NEWS
- ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

- ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

- ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

- ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು










