SHIMOGA : ಬಸ್ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಒಂದು ಲಕ್ಷ ರೂ. ಮೌಲ್ಯದ ಚಿನ್ನಾಭರಣ (JEWELS) ಕಳ್ಳತನ ಮಾಡಲಾಗಿದೆ.
ಭದ್ರಾವತಿಯ ಪ್ರಭು ಎಂಬುವವರು ತಮ್ಮ ಪತ್ನಿ ಮತ್ತು ಮಕ್ಕಳನ್ನು ದಾವಣಗೆರೆಯಲ್ಲಿರುವ ತಮ್ಮ ಮಾವನ ಮನೆಗೆ ಕಳುಹಿಸಲು ಕೆಎಸ್ಆರ್ಟಿಸಿಬಸ್ ನಿಲ್ದಾಣಕ್ಕೆ ಬಂದಿದ್ದರು. ಮೊದಲು ಬಂದ ಬಸ್ ರಶ್ ಇದ್ದಿದ್ದರಿಂದ ಮತ್ತೊಂದು ಬಸ್‌ನಲ್ಲಿ ಸೀಟ್ ಹಿಡಿದು, ಹತ್ತಿಸಿ ಕಳುಹಿಸಿದ್ದರು. ಬಸ್ ನ್ಯೂ ಮಂಡ್ಲಿ ಬಳಿ ತೆರಳುತ್ತಿದ್ದಂತೆ ಪತ್ನಿ ಕರೆ ಮಾಡಿದ್ದು, ವ್ಯಾನಿಟಿ ಬ್ಯಾಗಿನಲ್ಲಿದ್ದ ಚಿನ್ನಾಭರಣ ಕಾಣಿಸುತ್ತಿಲ್ಲ ಎಂದು ತಿಳಿಸಿದ್ದರು.
ತಮ್ಮ ಪತ್ನಿ ಇಬ್ಬರು ಮಕ್ಕಳೊಂದಿಗೆ ಬಸ್ ಹತ್ತುವಾಗ ಯಾರೋ ವ್ಯಾನಿಟಿ ಬ್ಯಾಗಿನ ಜಿಪ್ ತೆಗೆದು 22 ಗ್ರಾಂ ತೂಕದ ಬಂಗಾರದ ನೆಕ್ಲೇಸ್, 11 ಗ್ರಾಂನ ಒಂದು ಜೊತೆ ಬಂಗಾರದ ಜುಮಕಿ ಕಳ್ಳತನ ಮಾಡಿದ್ದಾರೆ. ಇವುಗಳ ಅಂದಾಜು ಮೌಲ್ಯ 1.13 ಲಕ್ಷ ರೂ. ಎಂದು ಪ್ರಭು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ