ಶಿವಮೊಗ್ಗ : ವಿಧಾನಸೌಧದಲ್ಲಿ ಕೆಲಸ (Job Scam) ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 10 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಶಾಲೆಯ ಸಹ ಶಿಕ್ಷಕನೊಬ್ಬನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಯುವಕನೊಬ್ಬನಿಗೆ ವೆಂಕಟೇಶ ಮೂರ್ತಿ ಎಂಬಾತನ ಪರಿಚಯವಾಗಿತ್ತು. ಆತ ತಾನು ಬಿಬಿಎಂಪಿಯಲ್ಲಿ ಗುತ್ತಿಗೆದಾರ ಎಂದು ಪರಿಚಯಿಸಿಕೊಂಡಿದ್ದ. ಸ್ವಲ್ಪ ಸಮಯದ ಬಳಿಕ ವಿಧಾನಸೌಧದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ (Job Scam) ವೆಂಕಟೇಶ ಮೂರ್ತಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೆ ಶಿವಮೊಗ್ಗದ ಯುವಕನಿಂದ ಹಂತ ಹಂತವಾಗಿ 10 ಲಕ್ಷ ರೂ. ಹಣವನ್ನು ಪಡೆದಿದ್ದ. ಕೆಲಸದ ಕುರಿತು ವಿಚಾರಿಸಿದಾಗ ಇನ್ನಷ್ಟು ಸಮಯವಾಗಲಿದೆ ಎಂದು ತಿಳಿಸಿದ್ದ ವೆಂಕಟೇಶ್ ಮೂರ್ತಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ವೆಂಕಟೇಶ ಮೂರ್ತಿ ಕುರಿತು ಪರಿಶೀಲಿಸಿದಾಗ ಆತ ಸರ್ಕಾರಿ ಶಾಲೆಯೊಂದರಲ್ಲಿ ಸಹ ಶಿಕ್ಷಕನಾಗಿದ್ದಾನೆ. ಅಲ್ಲದೆ ಆತ ಶಾಲೆಗು ಗೈರಾಗಿದ್ದ ಎಂದು ತಿಳಿದು ಬಂತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿಧಾನಸೌಧದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಮನದ ಕಡಲು ಟೀಮ್ ಜೊತೆಗೆ ಪ್ರೆಸ್ ಮೀಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200