ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನ್ಯಾಯಾಲಯಕ್ಕೆ ಹಾಜರಾಗಿ ಜೈಲಿಗೆ ಹಿಂತಿರುಗಿದ ಖೈದಿಯ ಪರಿಶೀಲನೆ ನಡೆಸಿದಾಗಿ ಕೀ ಪ್ಯಾಡ್ ಮೊಬೈಲ್ (Mobile) ಪತ್ತೆಯಾಗಿದೆ.
ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಮುಜೀಬ್‌ನನ್ನು ಪ್ರಕರಣವೊಂದರ ವಿಚಾರಣೆಗೆ ಭದ್ರಾವತಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜೈಲಿಗೆ ಬಂದ ಮುಜೀಬ್‌ನನ್ನು ಜೈಲಿನ ಪ್ರವೇಶದ್ವಾರದಲ್ಲಿ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಪರಿಶೀಲಿಸಿದರು. ಆತನ ಬಲಗಾಲಿನ ಮೊಣಕಾಲಿನ ಬಳಿ ಕಾರ್ಬನ್ ಪೇಪರ್‌ನಿಂದ ಸುತ್ತಿರುವ ವಸ್ತು ಪತ್ತೆಯಾಗಿತ್ತು.
ಕಾರ್ಬನ್ ಪೇಪರ್ ತೆಗೆದು ಪರಿಶೀಲಿಸಿದಾಗ ಕೆಂಪು ಬಣ್ಣದ ಕೀ ಪ್ಯಾಡ್ ಮೊಬೈಲ್ ಸಿಕ್ಕಿದೆ. ಘಟನೆ ಸಂಬಂಧ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್.ಪಿ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ » ಕೆಲಸ ಹುಡುಕುತ್ತಿರುವವರೆ ಹುಷಾರ್, ಮುಂದೆ ನಿಮಗು ಆಗಬಹುದು ಇಂಥಾ ಮೋಸ, ಏನದು?
Mobile
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





