ಶಿವಮೊಗ್ಗ ಲೈವ್.ಕಾಂ |SAGARA NEWS | 30 ಜುಲೈ 2021
ಬೈಕ್, ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸು ಕೆರೆಗೆ ಉರುಳಿದೆ. ಬೈಕ್ ಸವಾರರಿಬ್ಬರಿಗೂ ಗಂಭೀರ ಗಾಯವಾಗಿದೆ. ಬಸ್ನಲ್ಲಿದ್ದವರು ಅದೃಷ್ಟವಶಾತ್ ಬಚಾವಾಗಿದ್ದಾರೆ.
ಸಾಗರದ ಉಳ್ಳೂರು ಕಾಸ್ಪಾಡಿ ಕ್ರಾಸ್ನಲ್ಲಿ ಇವತ್ತು ಬೆಳಗ್ಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್, ಕೆರೆಗೆ ಉರುಳಿ ಬಿದ್ದಿದೆ.
ಹೇಗಾಯ್ತು ಘಟನೆ?
ಸಾಗರದಿಂದ ಶಿವಮೊಗ್ಗ ಮೂಲಕ ದಾವಣಗೆರೆಗೆ ತರಳಬೇಕಿದ್ದ ಕೆಎಸ್ಆರ್ಟಿಸಿ ಬಸ್, ಕಾಸ್ಪಾಡಿ ಕ್ರಾಸ್ ಬಳಿ ಬರುತ್ತಿದ್ದಾಗ ಘಟನೆ ಸಂಭಸಿದೆ. ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನ ರಸ್ತೆ ಮಧ್ಯೆಕ್ಕೆ ಬಂದಿದೆ. ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಡಿಕ್ಕಿಯಾಗಿ ಕೆರೆಗೆ ಪಲ್ಟಿ
ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಬಸ್ ಚಾಲಕನ ಪ್ರಯತ್ನ ವಿಫಲವಾಗಿದೆ. ಬೈಕ್ಗೆ ಡಿಕ್ಕಿ ಹೊಡೆದ ಬಸ್, ಕೆರೆಗೆ ಪಲ್ಟಿ ಹೊಡೆದಿದೆ. ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ದೀಪಕ್ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನೆರವಿಗೆ ನಿಂತ ಸ್ಥಳೀಯರು
ಅಪಘಾತದ ಸದ್ದು ಕೇಳುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಕೆರೆಗೆ ಉರುಳಿದ್ದ ಬಸ್ನಿಂದ ಪ್ರಯಾಣಿಕರನ್ನು ಹೊರಗೆಳೆದು ತಂದಿದ್ದಾರೆ. ಅಪಘಾತದಿಂದ ವಿಚಲಿತರಾಗಿದ್ದ ಪ್ರಯಾಣಿಕರಿಗೆ ಸಮಾಧನಪಡಿಸಿ, ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕಳುಹಿಸಲಾಯಿತು.
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ಚಾಲಕ, ಪ್ರಯಾಣಿಕರಿಂದ ಘಟನೆ ಸಂಬಂಧ ಮಾಹಿತಿ ಪಡೆದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200