ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 ಡಿಸೆಂಬರ್ 2021
ಸವಳಂಗ ಸಮೀಪ KSRTC ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆ ವೇಳೆ KSRTC ಬಸ್’ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಬಸ್ಸಿನಲ್ಲಿದ್ದವರು ಗಾಯಗೊಂಡಿದ್ದಾರೆ.
ಸವಳಂಗ ಸಮೀಪದ ಕಲ್ಲಾಪುರ ಬಳಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಚಾಲಕ ಮತ್ತು ಮತ್ತೊಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರೆಲ್ಲ ಭದ್ರಾವತಿ ತಾಲೂಕು ಯಡೇಹಳ್ಳಿಯವರು ಎಂದು ತಿಳಿದು ಬಂದಿದೆ.
ಮದುವೆ ತೆರಳುತ್ತಿದ್ದರು
ಮೃತರೆಲ್ಲ ನ್ಯಾಮತಿಯ ಹಳೆ ಜೋಗದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆ ಸಂಚಾರ ದಟ್ಟಣೆ ಉಂಟಾಗಿತ್ತು. ನ್ಯಾಮತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್ಸಿನಲ್ಲಿದ್ದವರಿಗೂ ಗಾಯ
ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾದ ಸಂದರ್ಭ, ಲಾರಿಯೊಂದು ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಬಸ್ಸಿನ ಹಿಂದೆಯೇ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ಸಿನಲ್ಲಿದ್ದ ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200