ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOSANAGARA : ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ KSRTC ಬಸ್ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹೊಸನಗರ ತಾಲೂಕು ಮತ್ತಿಮನೆ ಸಮೀಪದ ಬೊಪ್ಪನಮನೆ ಗ್ರಾಮದ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೇಗಾಯ್ತು ಅಪಘಾತ?
ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ತಿರುವಿನಲ್ಲಿ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್ ಮರ ಇದ್ದಿದ್ದರಿಂದ ಬಸ್ ಪೂರ್ಣ ಕಂದಕಕ್ಕೆ ಬಿದ್ದಿಲ್ಲ. ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಎದುರಿನ ವಾಹನವು ಜಖಂ
ಭಟ್ಕಳ ಕಡೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಎಟಿಎಂಗೆ ಹಣ ಹಾಕುವ ವಾಹನಕ್ಕೆ ಬಸ್ ಡಿಕ್ಕಿಯಾಗಿದೆ. ಎಟಿಎಂ ವಾಹನದ ಮುಂಭಾಗ ಜಖಂ ಆಗಿದೆ. ಬಸ್ ಪಲ್ಟಿಯ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮದ ಜನರು ಮತ್ತು ವಾಹನ ಸವಾರರು ಸ್ಥಳಕ್ಕೆ ದೌಡಾಯಿಸಿ ಪ್ರಯಾಣಿಕರ ರಕ್ಷಣೆ ಮಾಡಿದರು. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರ ಬಂದ ಯುವಕನಿಗೆ ಕಾದಿತ್ತು ಶಾಕ್