ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020
ರೈಲ್ವೆ ನಿಲ್ದಾಣದ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಮೃತದೇಹವು ಕೊಳೆತ ಸ್ಥತಿಯಲ್ಲಿ ಪತ್ತೆಯಾಗಿದ್ದು, ಗುರುತಿಸಲು ಅಸಾಧ್ಯವಾಗಿದೆ.
ಮಹಾದೇವಿ ಟಾಕೀಸ್ ರೈಲ್ವೆ ನಿಲ್ದಾಣದ ಪಾರ್ಕಿಂಗ್’ನಲ್ಲಿ ಘಟನೆ ನಡೆದಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಮಾರು ಹತ್ತು ದಿನದ ಹಿಂದೆ, ಅಪರಿಚಿತ ವ್ಯಕ್ತಿಯೊಬ್ಬ KA 20 MA 8877 ನಂಬರಿನ ಮಾರುತಿ ಓಮ್ನಿ ಕಾರನ್ನು ತಂದ ರೈಲ್ವೆ ನಿಲ್ದಾಣದ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಇವತ್ತು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೃತದೇಹ ಇರುವುದು ಪತ್ತೆಯಾಗಿದೆ.
ಸ್ಥಳಕ್ಕೆ ಡಾಗ್ ಸ್ಕ್ವಾಡ್
ಶ್ವಾನ ದಳವು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಸಿಪಿಐ ಮಾದಪ್ಪ, ಪಿಎಸ್ಐ ಶಿವಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422