ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 OCTOBER 2023
SHIMOGA : ಕೌಟುಂಬಿಕ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳಿದ್ದ ಸಹ್ಯಾದ್ರಿ ಕಾಲೇಜು ಪ್ರೊಫೆಸರ್ (lecturer) ಒಬ್ಬರ ಮನೆಯಲ್ಲಿ ಕಳ್ಳತನವಾಗಿದೆ. ನಗರದ ಎಂ.ಸಿ.ಲೇಔಟ್‌ನಲ್ಲಿ ಘಟನೆ ಸಂಭವಿಸಿದೆ.
ಸಹ್ಯಾದ್ರಿ ಕಾಲೇಜು ಪ್ರೊಫೆಸರ್ ಪವಿತ್ರಾ ಅವರು ತಮ್ಮ ಕುಟುಂಬದ ಕಾರ್ಯಕ್ರಮಕ್ಕಾಗಿ ಅ.24ರಂದು ಮೈಸೂರಿಗೆ ತೆರಳಿದ್ದರು. ಅ.26ರಂದು ಎದುರು ಮನೆಯವರು ಕರೆ ಮಾಡಿ ನಿಮ್ಮ ಮನೆಯ ಬಾಗಿಲು ತೆರೆದುಕೊಂಡಿದೆ. ಆಯುಧದಿಂದ ಮೀಟಿದಂತೆ ಕಾಣುತ್ತಿದೆ ಎಂದು ತಿಳಿಸಿದ್ದರು. ತಾವು ಬರುವವರೆಗೆ ಬಾಗಿಲಿಗೆ ಬೀಗ ಹಾಕಿರುವಂತೆ ಪವಿತ್ರಾ ಅವರು ಎದುರು ಮನೆಯವರಿಗೆ ಮನವಿ ಮಾಡಿದ್ದರು.
ಇದನ್ನೂ ಓದಿ- ಶಿವಮೊಗ್ಗ ಜೈಲ್ ಮೇಲೆ ದಾಳಿ, ಗಾರ್ಡನ್‌ನಲ್ಲಿ ಸಿಕ್ತು ಮೊಬೈಲ್, ಮಂಗಳೂರು ಬೀಡಿ, ಇನ್ನು ಏನೇನೆಲ್ಲ ಪತ್ತೆಯಾಯ್ತು?
ಮೈಸೂರಿನಿಂದ ಮರಳಿದ ಬಳಿಕ ಪವಿತ್ರಾ ಅವರು ಪರಿಶೀಲಿಸಿದಾಗ ಮನೆಯ ಕಬೋರ್ಡ್‌ನ ಲಾಕರ್ ಒಡೆದು ಕಳವು ಮಾಡಿರುವುದು ಗೊತ್ತಾಗಿದೆ. ಚಿನ್ನ ಮತ್ತು ಬೆಳ್ಳಿ ವಸ್ತುಗಳು ಮತ್ತು ಆಭರಣ ಕಳುವಾಗಿದೆ. ಇವುಗಳ ಅಂದಾಜು ಮೌಲ್ಯ 1.17 ಲಕ್ಷ ರೂ. ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















