ಶಿವಮೊಗ್ಗದ ಇಬ್ಬರು ಯುವಕರಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 JUNE 2024

SHIMOGA : ಜಗಳವಾಡಿ ಹರಿತ ಆಯುಧಗಳಿಂದ ವ್ಯಕ್ತಿಯೊಬ್ಬನ ಹತ್ಯೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆ, ಇಬ್ಬರು ಯುವಕರಿಗೆ ಜೀವಾವಧಿ (Life Term) ಶಿಕ್ಷೆ ಪ್ರಕಟಿಸಲಾಗಿದೆ. ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದ ಮಹಮ್ಮದ್‌ ನಖಿ ಅಲಿ ಅಲಿಯಾಸ್‌ ನಖಿ (21) ಮತ್ತು ಇಲಿಯಾಸ್‌ ನಗರದ ಮಹಮ್ಮದ್‌ ಅಬು ಸ್ವಲೇಹ ಅಲಿಯಾಸ್‌ ಸೋನು (21) ಶಿಕ್ಷೆಗೆ ಒಳಗಾದವರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏನಿದು ಪ್ರಕರಣ?

ವಾದಿ-ಎ-ಹುದಾ ವಾಸಿ ಮೊಹಮ್ಮದ್‌ ಜೈದಾನ್‌ ಮತ್ತು ಲಷ್ಕರ್‌ ಮೊಹಲ್ಲಾದ ನಕೀ ಅಲಿ ಮಧ್ಯೆ ಗಲಾಟೆಯಾಗಿತ್ತು. 2021ರ ಅಕ್ಟೋಬರ್‌ 29ರಂದು ರಾತ್ರಿ ವಾದಿ -ಎ-ಹುದಾ ಬಡಾವಣೆಯಲ್ಲಿ ನಕೀ ಅಲಿ ಮತ್ತು ಮಹಮ್ಮದ್‌ ಅಬು ಸೇರಿದಕೊಂಡು ಹರಿತ ಆಯುಧದಿಂದ ದಾಳಿ ನಡೆಸಿ ಮೊಹಮ್ಮದ್‌ ಜೈದಾನ್‌ನ ಹತ್ಯೆ ಮಾಡಿದ್ದರು. ಈ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

LIfe term Imprisonment

ತನಿಖೆ ನಡೆಸಿದ್ದ ಇನ್ಸ್‌ಪೆಕ್ಟರ್‌ ಎಂ.ಎಸ್‌.ದೀಪಕ್‌ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ. ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50,500 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ ಮೃತನ ತಂದೆ, ತಾಯಿಗೆ 40 ಸಾವಿರ ರೂ. ಮತ್ತು ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ಪರವಾಗಿ ಪಿ.ಓ. ಪುಷ್ಪಾ ವಾದ ಮಂಡಿಸಿದ್ದರು.

ಇದನ್ನೂ ಓದಿ – ಬೈಪಾಸ್‌ ರಸ್ತೆಯಲ್ಲಿ ಬಸ್‌ಗೆ ದಿಢೀರ್‌ ಎದುರು ಬಂದ ಬೈಕ್‌, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 25, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment