SHIVAMOGGA LIVE NEWS | 11 AUGUST 2023
SHIMOGA : ವಡ್ಡಿನಕೊಪ್ಪ (Vaddinakoppa) ಸಮೀಪ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು (Lover) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪತಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
![]() |
ಯಾರಿಗೆಲ್ಲ ಶಿಕ್ಷೆಯಾಗಿದೆ?
ಶಿವಮೊಗ್ಗ ವೆಂಕಟೇಶ ನಗರದ ಕೆ.ಕಾರ್ತಿಕ್ (28), ಆತನ ಸ್ನೇಹಿತರಾದ ಹೊಸಮನೆಯ ವಿ.ಭರತ್ (23) ಮತ್ತು ರಾಜೇಂದ್ರ ನಗರದ ಸಂದೀಪ್ (21) ಶಿಕ್ಷೆಗೆ ಒಳಗಾದವರು. ಕಾರ್ತಿಕ್‌ನ ಪತ್ನಿ ರೇವತಿ ಮತ್ತು ವಿಜಯ್ ಎಂಬಾತನನ್ನು 2017ರ ಸೆ.4ರಂದು ಕೊಲೆ ಮಾಡಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಹಾ ಧರಣಿ, 11 ಸಂಘಟನೆಗಳು ಭಾಗಿ, ಬೇಡಿಕೆಗಳೇನು?
ಹತ್ಯೆಗೆ ಕಾರಣವೇನು?
ಕಾರ್ತಿಕ್‌ನ ಪತ್ನಿ ರೇವತಿ ಶ್ರೀರಾಮನಗರದ ವಿಜಯ್‌ನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದು ವಡ್ಡಿನಕೊಪ್ಪ ಸಮೀಪ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಹತ್ಯೆ ಸಂಬಂಧ ವಿಜಯ್ ತಂದೆ ನೀಡಿದ್ದ ದೂರಿನ ಆಧಾರದಲ್ಲಿ ತುಂಗಾ ನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದರು.
ಇನ್ಸ್‌ಪೆಕ್ಟರ್ ಮಹಾಂತೇಶ್ ಬಿ.ಹೋಳಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಕೆ.ಮಾನು ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ ಮೂವರಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿ ಆರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಶಾಂತರಾಜ್ ಅವರು ವಾದ ಮಂಡಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200