ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JULY 2024
SHIMOGA : ವೈಯಕ್ತಿಕ ದ್ವೇಷಕ್ಕೆ ಹೊಳಲೂರಿನಲ್ಲಿ ಮಾರಕಾಸ್ತ್ರಗಳಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದ ಮೂವರಿಗೆ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ (Life Time) ಮತ್ತು ತಲಾ 20 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳು ಸಾದಾ ಜೈಲು ಶಿಕ್ಷೆ ನೀಡಿ ಆದೇಶಿಸಿದೆ.
ಹೊಳಲೂರು ಗ್ರಾಮದ ರಿಯಾಸ್(22), ಮುನಿರಾಜು (33) ಮತ್ತು ಅರುಣ್(20) ಶಿಕ್ಷೆಗೊಳಗಾದವರು. 2020ರ ಜು.27ರಂದು ರಾತ್ರಿ ಅದೇ ಗ್ರಾಮದ ಮಲ್ಲೇಶಪ್ಪ (39) ಎಂಬುವರನ್ನು ಅವರ ಜಮೀನು ಬಳಿ ಹತ್ಯೆ ಮಾಡಿದ್ದರು.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿ, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಟಿ.ಸಂಜೀವ್ಕುಮಾರ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಹೆಚ್.ಜೆ.ಮರುಳ ಸಿದ್ದಾರಾಧ್ಯ ಅವರು ಮೂವರಿಗೂ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಬಿ.ಎಸ್.ಮಮತಾ ವಾದ ಮಂಡಿಸಿದ್ದರು.
ಇದನ್ನೂ ಓದಿ – ತವರು ಮನೆಗೆ ಬಂದಿದ್ದ ಮಹಿಳೆ ನಾಪತ್ತೆ, ಬೆಳಗ್ಗೆ ಬಾವಿಯಲ್ಲಿ ಬಗ್ಗಿ ನೋಡಿದ ಕುಟುಂಬದವರಿಗೆ ಶಾಕ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















