ಶಿವಮೊಗ್ಗದ 73 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ರೂ. ದಂಡ, ಕಾರಣವೇನು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIMOGA, 9 AUGUST 2024 : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ 73 ವರ್ಷದ ವ್ಯಕ್ತಿಯೊಬ್ಬರಿಗೆ ಜೀವಾವಧಿ ಶಿಕ್ಷೆ (Life Time) ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ 1 ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ?

2023ರಲ್ಲಿ ಅಪ್ರಾಪ್ತೆ ಮೇಲೆ 73 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್‌ ಆರ್.ಎಲ್.ಲಕ್ಷ್ಮಿಪತಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆ 73 ವರ್ಷದ ವ್ಯಕ್ತಿಗೆ ಶಿಕ್ಷೆ ಪ್ರಕಟಿಸಲಾಗಿದೆ.Shimoga-Court-Complex

ಜೀವಾವಧಿ ಶಿಕ್ಷೆ, 2.50 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವಂತೆ ಆದೇಶಿಸಲಾಗಿದೆ. ಇನ್ನು, ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರ್ಕಾರದಿಂದ 6 ಲಕ್ಷ ರೂ.ವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಲಾಗಿದೆ.

ನ್ಯಾಯಾಧೀಶರಾದ ಮೋಹನ್ ಜೆ.ಎಸ್ ಅವರು ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಶ್ರೀಧರ್ ಹೆಚ್.ಆರ್ ವಾದ ಮಂಡಿಸಿದ್ದರು.

ಇದನ್ನೂ ಓದಿ ⇓

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಹೊಸನಗರದಲ್ಲಿ ಹೃದಯವಿದ್ರಾವಕ ಘಟನೆ

Leave a Comment