ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2020
ಕುವೆಂಪು ರಸ್ತೆಯಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ತೀವ್ರ ಗಾಯಗೊಂಡಿದ್ದ ಲೈನ್‍ಮನ್ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ವಿದ್ಯಾನಗರದ ಉಮಾಶಂಕರ್ (42) ಮೃತರು. ಅಕ್ಟೋಬರ್ 8ರಂದು ಸಂಜೆ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ 11 ಕೆ.ವಿ. ವಿದ್ಯುತ್ ಲೈನ್ ರಿಪೇರಿ ಮಾಡುತ್ತಿದ್ದರು. ಈ ವೇಳೆ ವಿದ್ಯತ್ ಶಾಕ್‍ನಿಂದಾಗಿ ಕಂಬದ ಮೇಲೆಯೆ ಸಿಕ್ಕಿಬಿದ್ದಿದ್ದರು.
ಅಗ್ನಿಶಾಮಕ ಸಿಬ್ಬಂದಿ ಉಮಾಶಂಕರ್ ಅವರನ್ನು ಕಂಬದ ಮೇಲಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಉಮಾಶಂಕರ್ ಅವರು ಬುಧವಾರ ಮೃತಪಟ್ಟಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್‌ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






